SUDDIKSHANA KANNADA NEWS/ DAVANAGERE/ DATE:05-04-2025
ಬೆಂಗಳೂರು: ಕಾಂಗ್ರೆಸ್ ಶಾಸಕರ ಮತ್ತು ಕಾರ್ಯಕರ್ತರ ಕಿರುಕುಳಕ್ಕೆ ಬಲಿಯಾದ ಮಡಿಕೇರಿಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಬಿಜೆಪಿ ನಾಯಕರು ಸಾಂತ್ವನ ಹೇಳಿ, ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.
ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಿರಂತರವಾಗಿರಲಿದ್ದು, ಭಂಡ ಸರ್ಕಾರ ಮತ್ತು ಭಂಡ ಮುಖ್ಯಮಂತ್ರಿಗಳ ವಿರುದ್ಧ ಬೀದಿಗಿಳಿದು ಹೋರಾಟ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ.
ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.
ಸೋಮವಾರದಿಂದ ಪ್ರಾರಂಭವಾಗುವ ಜನಾಕ್ರೋಶ ಯಾತ್ರೆಯು ರಾಜ್ಯದ ಪ್ರತಿ ಜಿಲ್ಲೆಗೆ ತಲುಪಲಿದೆ. ಈ ವೇಳೆ ಕಾಂಗ್ರೆಸ್ ಸರ್ಕಾರದ ಹಗಲು ದರೋಡೆಯನ್ನು ಜನರಿಗೆ ಮನದಟ್ಟು ಮಾಡಿಸುತ್ತೇವೆ ಎಂದು ಬಿ. ವೈ. ವಿಜಯೇಂದ್ರ ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕಕೆ. ಜಿ. ಬೋಪಯ್ಯ,
ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಕಾಂಗ್ರೆಸ್ ಶಾಸಕರ ಕಿರುಕುಳಕ್ಕೆ ಬಲಿಯಾದ ಬಿಜೆಪಿ ಕಾರ್ಯಕರ್ತ ಶ್ರೀ ವಿನಯ್ ಸೋಮಯ್ಯ ಅವರ ಡೆತ್ನೋಟಿನಲ್ಲಿ ಇರುವ ಎಲ್ಲರ ಹೆಸರನ್ನೂ ಎಫ್ಐಆರ್ನಲ್ಲಿ ಸೇರಿಸಬೇಕು ಎಂದು ಆಗ್ರಹಿಸಿ ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.