SUDDIKSHANA KANNADA NEWS/ DAVANAGERE/ DATE:23-02-2024
ದಾವಣಗೆರೆ: ರಾಜ್ಯದ ಕಳೆದ ಒಂಭತ್ತು ತಿಂಗಳಲ್ಲಿ ಕಾಂಗ್ರೆಸ್ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿಯನ್ನು ತೋರಿದಲಿತ ಸಮುದಾಯವನ್ನು ವಂಚಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಕೆ. ಬಿ. ಬಡಾವಣೆಯಲ್ಲಿರುವ ಬಿಜೆಪಿ ಕಚೇರಿಯಿಂದ ಮೆರವಣಿಗೆಯಲ್ಲಿ ಎಸಿ ಕಚೇರಿಯವರೆಗೆ ತೆರಳಿ ಎಸಿಯವರಿಗೆ ಮನವಿ ಅರ್ಪಿಸಲಾಯಿತು.
ಚುನಾವಣೆಯಲ್ಲಿ ತಮ್ಮ ಗೆಲುವಿನ ಸಲುವಾಗಿ ದಲಿತರಿಗೆ ಮೀಸಲಿಟ್ಟಿದ್ದ ರೂ. 11,144 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ವರ್ಗಾಯಿಸಿ ದಲಿತ ಹಿತವನ್ನು ಬಲಿಕೊಟ್ಟು ತಮ್ಮ ಸ್ವಾರ್ಥ ಸಾಧನೆ ಪೂರೈಸಿಕೊಂಡು ಇವರ ಡೋಂಗಿ ದಲಿತ ಕಾಳಜಿಯನ್ನು ಬಯಲು ಮಾಡಿದೆ. ದಲಿತರ ಹಿತದರಕ್ಷಣೆ ಮಾಡಬೇಕಿದ್ದ ಸಮಾಜಕಲ್ಯಾಣ ಸಚಿವ ಹೆಚ್. ಸಿ. ಮಹದೇವಪ್ಪನವರು ಈ ಅನ್ಯಾಯದ ವಿರುದ್ದ ಸೊಲ್ಲೆತ್ತದೆೇ ಕಾಂಗ್ರೆಸ್ ಪಾರ್ಟಿಯ ಹಿತಕ್ಕೆ ದಲಿತ ಸಮುದಾಯದ ಹಿತವನ್ನು ರಾಜಿ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯನವರು ಅಲ್ಪಸಂಖ್ಯಾತರಿಗೆ ರೂ. 10,000 ಕೋಟಿ ಹಣವನ್ನು ವೆಚ್ಚ ಮಾಡಲು ಮಾತ್ರ ಯಾವ ಗ್ಯಾರಂಟಿಯೂ ಅಡ್ಡ ಬಂದಿಲ್ಲ. ಇವರಿಗೆದಲಿತರ ಹಿತಾಸಕ್ತಿಗಿಂತ ಓಟು ಬ್ಯಾಂಕ್ ರಾಜಕಾರಣವು ಸರ್ಕಾರಕ್ಕೆ ಆದ್ಯತೆಯಾಗಿರುವುದು ಶೋಚನೀಯ ಸಂಗತಿ ಎಂದು ಹೇಳಿದರು.
ಮೊರಾರ್ಜಿ ಶಾಲೆಯ ಅಭಿವೃದ್ಧಿ ಮತ್ತು ಹೊಸ ಶಾಲೆಗಳ ಆರಂಭಕ್ಕೆ ಮೀಸಲಾದ ಹಣವು ಇತರ ಯೋಜನೆಗಳಿಗೆ ಬಳಕೆಯಾಗಿ ದಲಿತ ಮತ್ತು ಹಿಂದುಳಿದ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಸರ್ಕಾರ ಚಲ್ಲಾಟವಾಡುತ್ತಿದೆ. ದಲಿತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಮೀಸಲಿಟ್ಟ ಹಣವು ಕೂಡಾ ದುರ್ಬಳಕೆಯಾಗಿ ಉನ್ನತ ಶಿಕ್ಷಣದಿಂದ ದಲಿತ ವಿದ್ಯಾರ್ಥಿಗಳನ್ನು ವಂಚಿತರನ್ನಾಗಿ ಮಾಡಲಾಗುತ್ತಿದೆ. ರಾಜ್ಯ ಸರಕಾರದಗ್ಯಾರಂಟಿಯೋಜನೆಯ ಸಲುವಾಗಿ ಶಿಕ್ಷಣವನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕಳೆದ ಎಂಟು ತಿಂಗಳಿನಿಂದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ವರ್ಗದವರ ಗೃಹ ನಿರ್ಮಾಣಯೋಜನೆಯು ಸ್ಥಗಿತಗೊಂಡಿದೆ. ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಸಾವಿರಾರು ಮನೆಗಳನ್ನು ನಿರ್ಮಿಸಿ ಹಂಚುತ್ತಿದ್ದರೆ, ರಾಜ್ಯ ಸರಕಾರದ ಯೋಜನೆಯು ಕೋಮಾ ಸ್ಥಿತಿಗೆ ತಲುಪಿದೆ. ರೈತ ನಿಧಿ ಯೋಜನೆಯಲ್ಲಿ ದಲಿತ ಕುಟುಂಬದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವು ಸ್ಥಗಿತಗೊಂಡಿದೆ. ಹಾಗೂ ಕಿಸಾನ್ ಸಮ್ಮಾನ್ಯೋಜನೆಗೆ ಹೆಚ್ಚುವರಿಯಾಗಿ ನೀಡುತ್ತಿದ್ದ ₹4,000 ಗಳಿಗೂ ಕತ್ತರಿ ಪ್ರಯೋಗವಾಗಿದೆ. ಸಿದ್ದರಾಮಯ್ಯನವರು ಬಾಯಿ ತೆಗೆದರೆ ದಲಿತ ಮತ್ತು ಆದಿವಾಸಿಗಳ ಕಲ್ಯಾಣದ ಬಗ್ಗೆ ಮಾತನಾಡುವುದಕ್ಕೆ ಮಾತ್ರಅವರ ಹಿತಾಸಕ್ತಿಯನ್ನು ಸಿಮೀತಗೊಳಿಸಿದ್ದಾರೆ ಎಂದು ದೂರಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡದವರಲ್ಲಿ ಉದ್ಯಮಶೀಲತೆ ಉತ್ತೇಜಿಸುವ ಯೋಜನೆಯನ್ನು ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆಆಸಕ್ತಿಯಿಲ್ಲದಂತಾಗಿದೆ. ರಸ್ತೆಬದಿಯ ವ್ಯಾಪಾರಿಗಳಿಗೆ ಕೇಂದ್ರ ಸರಕಾರದ ಸ್ವ-ನಿಧಿ ಯೋಜನೆಗೆ ರಾಜ್ಯ ಸರ್ಕಾರವುದಲಿತ ಉದ್ಯಮಿಗಳಿಗೆ ಪ್ರೋತ್ಸಹ ಧನವಾಗಿ ಬಡ್ಡಿಯಲ್ಲಿ ಪಾಲು ಕೊಡಬಹುದಿತ್ತು, ಆದರೆ ಅದರ ಕಡೆ
ಗಮನವೇ ಕೊಟ್ಟಿಲ್ಲ ಕೇಂದ್ರ ಸರ್ಕಾರ ಮುದ್ರಾ ಯೋಜನೆಯಲ್ಲಿ ದಲಿತರಿಗೆ ಸ್ವಯಂ ಉದ್ಯೋಗ ನೀಡಲು ಉತ್ತೇಜನ ಕೊಡುತ್ತಿದೆ. ಆದರೆ ರಾಜ್ಯ ಸರಕಾರದಲ್ಲಿ ಉದ್ಯಮದಾರರನ್ನು ರೂಪಿಸಲು ಮತ್ತುಉತ್ತೇಜಿಸಲು ಯಾವುದೇ ಆಸಕ್ತಿ ವಹಿಸಿಲ್ಲ ಮತ್ತುಯಾವುದೇ ಕಾರ್ಯಕ್ರಮವನ್ನು ಬಜೆಟ್ ನಲ್ಲಿ ಘೋಷಿಸಿಯೂ ಇಲ್ಲ ಎಂದು ಆರೋಪಿಸಿದರು.
ಗ್ಯಾರಂಟಿಗೆ ಹಣ ನೀಡಬೇಕಾದ ಕಾರಣ 2024-25 ಮುಂಗಡ ಪತ್ರದಲ್ಲಿ ಮತ್ತೆ ಹನ್ನೊಂದು ಸಾವಿರ ಕೋಟಿ ಅನುದಾನ ಕಡಿತವಾಗಿದೆ. ಸಂವಿಧಾನ ಜಾಥಾ ಮಾಡುತ್ತಿರುವ ಸರಕಾರ ಸಂವಿಧಾನದ ಆಶಯಕ್ಕೆ ದಲಿತರಿಗೆ ಸೇರಬೇಕಾದ ಅನುದಾನ ನಿರಾಕರಿಸಿ ಅನ್ಯಾಯ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎನ್. ರಾಜಶೇಖರ್ ನಾಗಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಐರಾಣಿ ಅಣ್ಣೇಶ್, ಧನಂಜಯ ಕಡ್ಲೆಬಾಳ, ಅನಿಲ್ ಕುಮಾರ್ ನಾಯಕ್, ಮಾಜಿ ಶಾಸಕ ಎಸ್. ಎ. ರವೀಂದ್ರನಾಥ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಎ. ಎಚ್. ಶಿವಯೋಗಿ ಸ್ವಾಮಿ, ಜಿ. ಎಸ್. ಅನಿತ್ ಕುಮಾರ, ಮಾಜಿ ಶಾಸಕ ಎಂ. ಬಸವರಾಜ ನಾಯಕ್, ನಿಕಟ ಪೂರ್ವ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ರಾಜ್ಯ ಎಸ್ ಟಿ ಮೋರ್ಚಾ ಉಪಾಧ್ಯಕ್ಷ ಶ್ರೀನಿವಾಸ್ ದಾಸ್ ಕರಿಯಪ್ಪ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಬಿಟಿ ಶಾಮ್, ಮಹಾನಗರ ಪಾಲಿಕೆ ಸದಸ್ಯರಾದ ಎಸ್. ಟಿ. ವೀರೇಶ್, ಪ್ರಸನ್ನ ಕುಮಾರ್, ಶಿವಾನಂದ, ಪಕ್ಷದ ಮುಖಂಡರಾದ ಯಶವಂತರಾವ್ ಜಾದವ್, ಬಾತಿ ವೀರೇಶ್, ಮುಂಜನಾಯಕ, ವಿಶ್ವಾಸ್ ಹೆಚ್. ಪಿ, ಎಸ್ ಸಿ ಮೋರ್ಚಾ ಅಧ್ಯಕ್ಷ ಹನುಮಂತ ನಾಯಕ್, ಗಂಗಾಧರ ಜಿ.ವಿ, ಎಸ್ ಟಿ ಮೋರ್ಚಾ ಅಧ್ಯಕ್ಷ ಕೃಷ್ಣಪ್ಪ, ಪಿ.ಸಿ ಶ್ರೀನಿವಾಸ್, ಉತ್ತರ ವಿಧಾನಸಭಾ ಅಧ್ಯಕ್ಷ ಬೇತೂರ್ ಸಂಗಪ್ಪ, ಸಾಮಾಜಿಕ ಜಾಲತಾಣ ಸಂಚಾಲಕರಾದ ಕೊಟ್ರೇಶ್ ಗೌಡ, ಕೆ.ಜಿ ಕಲ್ಲಪ್ಪ , ಬಾತಿ ಸಿದ್ದೇಶ್, ರವಿ ನಾಯಕ್, ಬಾಳೆಕಾಯಿ ಶಿವು, ಕಿಶೋರ್, ಗುಡ್ಡೇಶ್, ಸೋಗಿ ಗುರು, ತರಕಾರಿ ಶಿವು, ವಿನಯ್, ಸಚಿನ್ ವರ್ಣೇಕರ್, ರಘು ವರ್ಣೇಕರ್, ರಾಜು, ಗುರು ಕೆ. ವಿ, ರೂಪ ಕಾಟವೆ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೈಲಜಾ, ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.