Site icon Kannada News-suddikshana

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿ ಪರ ನಿಂತ ಬಿಜೆಪಿ!

SUDDIKSHANA KANNADA NEWS/ DAVANAGERE/ DATE:02-12-2024

ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಚಂದ್ರಶೇಖರನಾಥ ಮಹಾ ಸ್ವಾಮೀಜಿಗಳ ವಿರುದ್ಧ ರಾಜ್ಯದ ಕಾಂಗ್ರೆಸ್‌ ಸರ್ಕಾರ ಎಫ್ಐಆರ್ ದಾಖಲಿಸಿ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಇಂದು ಶ್ರೀಮಠಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ನೇತೃತ್ವದ ತಂಡವು ಶ್ರೀಗಳ ಆಶೀರ್ವಾದ ಪಡೆಯಿತು.

ಪ್ರಕರಣದ ಕುರಿತು ಚರ್ಚಿಸಿ ಪೂಜ್ಯ ಸ್ವಾಮೀಜಿಗಳೊಂದಿಗೆ ಬಿಜೆಪಿ ಸದಾಕಾಲ ನಿಲ್ಲಲಿದೆ ಎಂಬ ವಿನಮ್ರ ಅಭಯವನ್ನು ನೀಡಲಾಯಿತು.

ರಾಜಕೀಯ ಪ್ರೇರಿತವಾಗಿ ಸ್ವಾಮೀಜಿಗಳ ವಿರುದ್ಧ ಎಫ್ಐಆರ್ ದಾಖಲಾಗುವ ಮುನ್ನವೇ ಸಮರ್ಪಕ ಸೌಹಾರ್ದತೆಯ ಪ್ರತೀಕವಾಗಿ ಸ್ಪಷ್ಟನೆಯನ್ನು ನೀಡಿದ್ದಾರೆ, ಆದಾಗ್ಯೂ ಶ್ರೀಗಳಿಗೆ ಕಿರುಕುಳ ನೀಡುವ ಪ್ರವೃತ್ತಿಯನ್ನು ರಾಜ್ಯ ಸರ್ಕಾರ ಮುಂದುವರೆಸಿದರೆ ಹೋರಾಟ ಕೈಗೆತ್ತಿಕೊಳ್ಳುವುದು ಅನಿವಾರ್ಯವಾದೀತು ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಡಿಸಿಎಂ ಡಾ. ಅಶ್ವತ್ ನಾರಾಯಣ್, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಂ. ರುದ್ರೇಶ್, ಮುಖಂಡರಾದ ಅನಿಲ್ ಚಳಗೇರಿ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version