ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬಿಜೆಪಿ ಭಾವನೆ ಕೆರಳಿಸುತ್ತೆ, ನಾವು ಬದುಕು ಕಲ್ಪಿಸುತ್ತೇವೆ, ರಾಜ್ಯದ ನಾಲ್ಕೂವರೆ ಕೋಟಿ ಫಲಾನುಭವಿಗಳ ಹೀಯಾಳಿಸುತ್ತಿರುವ ಬಿಜೆಪಿ: ಸಿಎಂ ಗುಡುಗು

On: March 4, 2024 2:36 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:04-03-2024

ಬೆಂಗಳೂರು: ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಮರಳು ಮಾಡಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆ ಗಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವೃಷಭಾವತಿ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ಮತ್ತು ನೆಲಮಂಗಲ ವಿಧಾನಸಭಾ ಕ್ಷೇತ್ರದ ವಿವಿಧ ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ನಾವು ಮಾಡುವ ನೀರಾವರಿ ಯೋಜನೆ, ಕುಡಿಯುವ ನೀರಿನ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಏಕೆ ಮಾಡಲಿಲ್ಲ? ಕೇವಲ ನಿಮ್ಮನ್ನು ಭಾವನಾತ್ಮಕವಾಗಿ ಮರುಳು ಮಾಡಿದರೆ ಸಾಕಾ ಎಂದು ಸಿಎಂಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

3 ಸಾವಿರ ಕೋಟಿ ರೂಪಾಯಿಯನ್ನು ಕೆ.ಸಿ.ವ್ಯಾಲಿ ಮತ್ತು ಎವ್.ಎನ್.ವ್ಯಾಲಿಗೆ ನಾವು ಖರ್ಚು ಮತ್ತು ಈಗ ವೃಷಭಾವತಿ ಯೋಜನೆಯನ್ನು 2240 ಕೋಟಿ ಖರ್ಚು ಮಾಡಿ ಮಾಡುತ್ತಿದ್ದೇವೆ. ಇದರಿಂದ ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು ಜಿಲ್ಲೆಗಳ ಜನರ ನೀರಿನ ಬವಣೆ ಶಾಶ್ವತವಾಗಿ ತೀರುತ್ತದೆ. ಮೊದಲ ಹಂತದಲ್ಲಿ 70 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ. ಇದರಿಂದ ನಾಲ್ಕೂ ಜಿಲ್ಲೆಗಳ ಅಂತರ್ಜಲ ಪ್ರಮಾಣ ವೃದ್ಧಿಯಾಗುತ್ತದೆ. ಜಮೀನುಗಳಿಗೆ ನೀರಿನ ಆಸರೆ ಹೆಚ್ಚಾಗಿ ಪರಿಣಾಮವಾಗಿ ಜನರ ಆರ್ಥಿಕ ಶಕ್ತಿಯೂ ಹೆಚ್ಚಾಗುತ್ತದೆ ಎಂದು ವಿವರಿಸಿದರು.

ಶ್ರೀನಿವಾಸ್ ಶಾಶ್ವತ ಶಾಸಕ

ಶಾಸಕ ಶ್ರೀನಿವಾಸ್ ಅವರು ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 850 ಕೋಟಿಗೂ ಹೆಚ್ಚು ಹಣವನ್ನು ಕ್ಷೇತ್ರಕ್ಕೆ ತಂದಿದ್ದಾರೆ. ಶ್ರೀನಿವಾಸ್ ಬಹಳ ಕ್ರಿಯಾಶೀಲ ಶಾಸಕ. ಹಿಡಿದ ಕೆಲಸ ಬಿಡಲ್ಲ. ನನ್ನ ಬಳಿಗೆ ಬಂದಾಗೆಲ್ಲಾ ನೆಲಮಂಗಲದ ಅಭಿವೃದ್ಧಿ ಬಗ್ಗೆಯೇ ಚರ್ಚೆ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ನೂರಾರು ಕೋಟಿ ಹಣ ತರುತ್ತಿದ್ದಾರೆ. ಆದ್ದರಿಂದ ಶ್ರೀನಿವಾಸ್ ಅವರನ್ನು ಶಾಶ್ವತವಾಗಿ ಕಾಂಗ್ರೆಸ್ ನಿಂದ ಗೆಲ್ಲಿಸಿ ಎಂದು ಕರೆ ನೀಡಿದರು.

ರಾಜ್ಯದ ಜನರಿಗೆ ಅನ್ನ ಕೊಡಬೇಕು. ಅದಕ್ಕಾಗಿ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿ ಕೊಡ್ತೀವಿ. ನಮಗೆ ಅಕ್ಕಿ ಕೊಡಿ ಎಂದು ಕೇಂದ್ರಕ್ಕೆ ಕೇಳಿದೆವು. ಕೇಂದ್ರದ ಬಿಜೆಪಿ ರಾಜ್ಯದ ಜನರಿಗೆ ಅನ್ನ ಕೊಡಲು ನಿರಾಕರಿಸಿತು. ಬಡವರ ಅನ್ನ ವಿರೋಧಿಸುವ ಬಿಜೆಪಿಗೆ ನಾಚಿಕೆ ಕೂಡ ಆಗಲಿಲ್ಲ. ಬಳಿಕ ನಾವೇ ಅಕ್ಕಿ ಬದಲಿಗೆ ಹಣವನ್ನು ಪ್ರತಿಯೊಬ್ಬರ ಖಾತೆಗೆ ಹಾಕಿದರೆ, ಈ ಫಲಾನುಭವಿಗಳನ್ನು ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಬಡವರನ್ನು ಅವಮಾನಿಸುವುದು ಬಿಜೆಪಿಗೆ ಚಾಳಿ ಆಗಿಬಿಟ್ಟಿದೆ. ಇದನ್ನು ತಕ್ಷಣ ನಿಲ್ಲಿಸಿ ಎಂದು ಎಚ್ಚರಿಸಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ , ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರ ಸಚಿವ ಕೆ.ಹೆಚ್. ಮುನಿಯಪ್ಪ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜ್ ಅವರೆ, ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಶರತ್ ಬಚ್ಚೇಗೌಡ , ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಸಚಿವ ಎಸ್. ಟಿ. ಸೋಮಶೇಖರ್ ಹಾಗೂ ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್. ಶ್ರೀನಿವಾಸ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment