Site icon Kannada News-suddikshana

ಹನುಮಾನ್ ಚಾಲಿಸ್ ಪಠಣ ಮಾಡಿದ್ದಕ್ಕೆ ಹಲ್ಲೆ…?: ಮೂವರ ಬಂಧನ, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲ..!

SUDDIKSHANA KANNADA NEWS/ DAVANAGERE/ DATE:18-03-2024

ಬೆಂಗಳೂರು: ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಹನುಮಾನ್ ಚಾಲಿಸ್ ಪಠಾಣ್ ಮಾಡುತ್ತಿದ್ದಕ್ಕೆ ಗುಂಪೊಂದು ಹಲ್ಲೆ ನಡೆಸಿರುವ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಈ ವಿಚಾರ ಈಗ ರಾಜಕೀಯ ಕೆಸರೆರಚಾಟಕ್ಕೆ ತಿರುಗಿದ್ದು, ಬಿಜೆಪಿ ಟ್ವೀಟ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದೆ.

ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಕೈಗೆ ಸಿಕ್ಕು ತಾಲಿಬಾನ್ ಆಗಿ ಬದಲಾಗುತ್ತಿದೆ. ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಮೊಬೈಲ್ ಅಂಗಡಿಗೆ ನುಗ್ಗಿದ ಮತಾಂಧ ಕಿಡಿಗೇಡಿಗಳು ಮುಖೇಶ್ ಎಂಬ ಹಿಂದೂ ಯುವಕನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿ ಓಡಿ ಹೋಗಿದ್ದಾರೆ ಎಂದು ಆರೋಪಿಸಿದೆ.

ಅಂಗಡಿ ಮಾಲೀಕ ಮುಖೇಶ್ ಸಂಜೆ ಪೂಜೆ ಸಮಯದಲ್ಲಿ ಭಕ್ತಿ ಗೀತೆಗಳನ್ನು ಹಾಕಿದ್ದೇ ಮತಾಂಧ ದುರುಳರು ಹಲ್ಲೆ ಮಾಡಲು ಕಾರಣ‌. ಹಲ್ಲೆಗೊಳಗಾದ ಮುಖೇಶ್ ಹಲಸೂರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೂ, ಪೊಲೀಸರು ದೂರು ದಾಖಲಿಸಿಕೊಳ್ಳದೆ ಹಿಂದೇಟು ಹಾಕುತ್ತಿದ್ದಾರೆ ಎಂದರೆ, ಇದರ ಹಿಂದೆ ಮಜಾವಾದಿ ಸಿದ್ದರಾಮಯ್ಯ ಸರ್ಕಾರದ ಕಳಂಕಿತ ಕೈಗಳ ಕೈವಾಡ ಇರುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಕೂಡಲೇ ಪಾ’ಕೈ’ಸ್ತಾನ್ ಸರ್ಕಾರ ಮತಾಂಧ ಗೂಂಡಾ ಬ್ರದರ್ಸ್‌ಗಳನ್ನು ಬಂಧಿಸಿ ಕ್ರಮಕೈಗೊಳ್ಳದೆ ಹೋದರೆ, ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಚ್ಚರ ಎಂದು ಹೇಳಿರುವ ಬಿಜೆಪಿಯು ಮುಖೇಶ್ ನೀಡಿದ ದೂರಿನಂತೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದೆ.

Exit mobile version