SUDDIKSHANA KANNADA NEWS/ DAVANAGERE/ DATE:17-03-2025
ಬೆಂಗಳೂರು: ನರೇಂದ್ರ ಮೋದಿ ಅಧಿಕಾರಕ್ಕೆ ಬಂದು 11 ವರ್ಷಗಳಾದರೂ ಕೇಂದ್ರ ಸರ್ಕಾರ ವಿಧವಾ ವೇತನ, ಅಂತ್ಯೋದಯ ಯೋಜನೆ, ವೃದ್ಧಾಪ್ಯ ವೇತನವನ್ನು ಒಂದು ರೂಪಾಯಿ ಹೆಚ್ಚಿಸಿಲ್ಲ. ವಸತಿ ಯೋಜನೆಗಳಿಗೆ ಹೆಚ್ಚಳ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಕ್ಯಾಪಿಟಲ್ ಹೂಡಿಕೆಗಳಿಗೆ 2,70,695 ಕೋಟಿ ಕಾಮಗಾರಿಗಳನ್ನು ಅನುದಾನ ಒದಗಿಸದೇ ತೆಗೆದುಕೊಂಡಿರಿ. ಮುಖ್ಯಮಂತ್ರಿಗಳ ವಿಶೇಷ ಅನುದಾನದ ಮೂಲಕ 1,66,426 ಕೋಟಿ ನೀಡಲಾಗಿದೆ. 36 ಸಾವಿರ ಕೋಟಿ ಬಾಕಿ ಬಿಲ್ಲುಗಳು ಬಿಜೆಪಿಯ ಬಳುವಳಿ ಎಂದು ಕಿಡಿಕಾರಿದರು.
ನಿಮ್ಮಿಂದ ನಾವು ಕಷ್ಟ ಪಡುವ ಸಂದರ್ಭ ಒದಗಿದೆ. ಕೇಂದ್ರ ಸರ್ಕಾರ 72 ಸಾವಿರ ಕೊಟ್ಟರೆ ರಾಜ್ಯ ಸರ್ಕಾರ 42 ಸಾವಿರ ಕೊಡುತ್ತದೆ. ಕರ್ನಾಟಕ 2025-26 ನೇ ಸಾಲಿಗೆ 5ಲಕ್ಷ ಕೋಟಿ ರೂಪಾಯಿ ತೆರಿಗೆ ಕೊಡುತ್ತಿದ್ದೇವೆ. ನಮಗೆ ಅಂದಾಜು 51 ಸಾವಿರ ಕೋಟಿ ವಾಪಸ್ಸು ಬರಬೇಕಾಗುತ್ತದೆ. ಹಾಗೆಂದು ಕೇಳಿದರೆ ಕೇಂದ್ರ ಸರ್ಕಾರದ್ದು ಮಾತನಾಡಬಾರದೆಂದು ಅಶೋಕ್ ಪ್ರಶ್ನಿಸುತ್ತಾರೆ. ಗ್ರಾಮೀಣ ಮತ್ತು ಪಟ್ಟಣ ಪ್ರದೇಶದ ಬಡವರಿಗೆ ಕೊಡುವ ಈ ಯೋಜನೆಗಳಿಗೆ ಒಂದು ರೂಪಾಯಿ ಹೆಚ್ಚಳವಾಗಿಲ್ಲ. ರಾಜ್ಯಕ್ಕೆ 15 ನೇ ಹಣಕಾಸು ಯೋಜನೆಯಡಿ ಅನುದಾನದಲ್ಲಿ ಆಗಿರುವ ಅನ್ಯಾಯವನ್ನು ನಾವು ಪ್ರಶ್ನಿಸಬಾರದಂತೆ. ಅನ್ಯಾಯ ಸರಿ ಮಾಡಿ ಎಂದು ಕೇಳಬಾರದಾ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಆರ್ಥಿಕವಾಗಿ ಹೆಚ್ಚು ಅನುದಾನ ನೀಡಲು ಸಾಧ್ಯವಾಗದೆ ಇರುವುದು ಬಿಜೆಪಿ ಸರ್ಕಾರದಿಂದ. ಬಿಜೆಪಿ ಅಧಿಕಾರದಲ್ಲಿದ್ದಾಗ ಕ್ಯಾಪಿಟಲ್ ಹೂಡಿಕೆಗಳಿಗೆ 2,70,695 ಕೋಟಿ ಕಾಮಗಾರಿಗಳನ್ನು ಅನುದಾನ ಒದಗಿಸದೇ ತೆಗೆದುಕೊಂಡಿರಿ. ಮುಖ್ಯಮಂತ್ರಿಗಳ ವಿಶೇಷ ಅನುದಾನದ ಮೂಲಕ 1,66,426 ಕೋಟಿ ನೀಡಲಾಗಿದೆ. 36 ಸಾವಿರ ಕೋಟಿ ಬಾಕಿ ಬಿಲ್ಲುಗಳು ನಿಮ್ಮ ಬಳುವಳಿ. ನಿಮ್ಮಿಂದ ನಾವು ಕಷ್ಟ ಪಡುವ ಸಂದರ್ಭ ಒದಗಿದೆ ಎಂದು ಲೆಕ್ಕ , ದಾಖಲೆ ಮಂಡಿಸಿದರು.
ನೀವು ಕೇಂದ್ರದಿಂದಲೂ ಅನುದಾನ ತಂದಿಲ್ಲ. ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು 15 ನೇ ಹಣಕಾಸು ಆಯೋಗದ ಅಧ್ಯಕ್ಷರು 11495 ಕೋಟಿ ಶಿಫಾರಸ್ಸು ಮಾಡಿದರು. ನೀವು ಈ ಬಗ್ಗೆ ಕೇಳಲಿಲ್ಲ ಎಂದು ತಿರುಗೇಟು ನೀಡಿದರು.