ಬೆಂಗಳೂರು: ಉಮರ್ ಖಾಲಿದ್ ಅವರು ಆರ್ ಎಸ್ ಎಸ್ ನಂತೆ ಪಾಕಿಸ್ತಾನದ ಜೊತೆ ಗುಪ್ತ ಚರ್ಚೆ ನಡೆಸಿಲ್ಲ. ಸಂಘ ಪರಿವಾರದವರಂತೆ ಐಎಸ್ಐ ಏಜೆಂಟ್ ಗಳ ಜೊತೆ ಮಾತುಕತೆಯನ್ನೂ ನಡೆಸಿಲ್ಲ. ಕನಿಷ್ಟಪಕ್ಷ ಆಮಂತ್ರಣವೇ ಇಲ್ಲದ ಪಾಕ್ ಪ್ರಧಾನಿಯ ಕುಟುಂಬದ ಕಾರ್ಯಕ್ರಮಕ್ಕೆ ಹೋಗಿ ಬಿರಿಯಾನಿ ತಿಂದಿಲ್ಲ. ದೇಶದ ಜನರ ಪರವಾಗಿ ಮಾತನಾಡಿದ ವಿದ್ಯಾವಂತ ಜನಪರ ಚಳವಳಿಗಾರ ಉಮರ್ ಖಾಲಿದ್ ರನ್ನು ದೇಶದ್ರೋಹಿ ಎನ್ನುವವರೇ ನಿಜವಾದ ರಾಷ್ಟ್ರದ್ರೋಹಿಗಳು ಎಂದು ಕೆಪಿಸಿಸಿ ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ಹೇಳಿದ್ದಾರೆ.
ಉಮರ್ ಖಾಲಿದ್ ಅವರನ್ನು ನಾನು ರಾಷ್ಟ್ರವಾದಿ ಎಂದು ಕರೆದಿದ್ದೇನೆ. ನನ್ನ ಹೇಳಿಕೆಯನ್ನು ‘ದೇಶದ್ರೋಹ’ ಎಂದು ಕರೆಯುವ ಹಕ್ಕು ಯಾರಿಗೂ ಇಲ್ಲ ಎಂದಿದ್ದಾರೆ.
ನಾನು ಉಮರ್ ಖಾಲಿದ್ ಅವರನ್ನು ರಾಷ್ಟ್ರವಾದಿ ಎಂದು ಕರೆದಿದ್ದೇನೆ. ಅದರಲ್ಲಿ ನನಗೆ ಯಾವುದೇ ಹಿಂಜರಿಕೆಯಿಲ್ಲ. ಯಾರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ ಎಂಬ ಕಾರಣಕ್ಕೆ ಅವರನ್ನು ನ್ಯಾಯಾಲಯದಲ್ಲಿ ಅಪರಾಧಿ ಎಂದು ಘೋಷಿಸಲು ಸಾಧ್ಯವಿಲ್ಲ. ಅಷ್ಟಕ್ಕೂ ಯಾವ ನ್ಯಾಯಾಲಯ ಖಾಲೀದ್ ನನ್ನು ದೇಶದ್ರೋಹಿ ಎಂದಿದೆ? ಎಂದು ಪ್ರಶ್ನಿಸಿದ್ದಾರೆ.
ಆರು ವರ್ಷಗಳ ಕಾಲ ವಿಚಾರಣೆ ನಡೆಸದೆ ಯಾಕೆ ಮೀನಾಮೇಷ ಎಣಿಸುತ್ತಿದೆ? ಆರೋಪ ಮತ್ತು ಅಪರಾಧ ಸಾಬೀತಾಗಿರುವುದು ಒಂದೇ ಅಲ್ಲ. ಈ ಸರಳ ಕಾನೂನು ತತ್ವವನ್ನು ವಿಜಯೇಂದ್ರ ಮತ್ತು ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳದೆ ತಮ್ಮ ಅವಿವೇಕಿತನವನ್ನ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.





Leave a comment