ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸೈಯದ್ ಸೈಫುಲ್ಲಾ ಸಾಬ್ ಭೇಟಿ ಮಾಡಿ ಆಶೀರ್ವಾದ ಪಡೆದ ಹೆಚ್. ಬಿ. ಮಂಜಪ್ಪ, ವಡ್ನಾಳ್ ಜಗದೀಶ್

On: October 6, 2025 5:41 PM
Follow Us:
ಆಶೀರ್ವಾದ
---Advertisement---

SUDDIKSHANA KANNADA NEWS/DAVANAGERE/DATE:06_10_2025

ದಾವಣಗೆರೆ: ರಾಜ್ಯ ಸರ್ಕಾರದ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹೆಚ್. ಬಿ. ಮಂಜಪ್ಪ ಮತ್ತು ಜೀವ ವೈವಿಧ್ಯ ನಿಗಮ ಮಂಡಳಿಯ ಅಧ್ಯಕ್ಷ ವಡ್ನಾಳ್ ಜಗದೀಶ್ ಅವರು ಕಾಂಗ್ರೆಸ್ ಹಿರಿಯ ಮುಖಂಡ ಸೈಯದ್ ಸೈಫುಲ್ಲಾ ಸಾಬ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಸೈಯದ್ ಸೈಫುಲ್ಲಾ ಅವರು ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿದರು.

READ ALSO THIS STORY: ಅನಧಿಕೃತ ಹಂದಿ ಸಾಕಾಣಿಕೆಯಿಂದ ಸೌಂದರ್ಯಕ್ಕೆ ತೊಂದರೆ, ಬೀಡಾಡಿ ದನಗಳಿಂದ ಸಂಚಾರಕ್ಕೆ ಅಡ್ಡಿ: ಮಾಲೀಕರಿಗೆ ಡಿಸಿ ಕೊಟ್ಟ ಖಡಕ್ ಸೂಚನೆ ಏನು?

ಹಳೇದಾವಣಗೆರೆಯ ಸೈಯದ್ ಸೈಫುಲ್ಲಾ ಸಾಬ್ ಅವರ ನಿವಾಸಕ್ಕೆ ಭೇಟಿ ನೀಡಿದ ಹೆಚ್. ಬಿ. ಮಂಜಪ್ಪ ಮತ್ತು ವಡ್ನಾಳ್ ಜಗದೀಶ್ ಅವರು ಸಹಕಾರ ಕೋರಿದರು. ಈ ವೇಳೆ ಸೈಯದ್ ಸೈಫುಲ್ಲಾ ಅವರಿಂದ ಆಶೀರ್ವಾದ ಪಡೆದರು.

ಈ ವೇಳೆ ಮಾತನಾಡಿದ ಸೈಯದ್ ಸೈಫುಲ್ಲಾ ಸಾಬ್ ಅವರು, ದಾವಣಗೆರೆಗೆ ಎರಡು ಮಂಡಳಿಗಳ ಅಧ್ಯಕ್ಷರ ಭಾಗ್ಯ ಸಿಕ್ಕಿದೆ. ಹೆಚ್. ಬಿ. ಮಂಜಪ್ಪ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡುವ ಜೊತೆಗೆ ಪಕ್ಷ ಸಂಘಟನೆ ಮಾಡಿದವರು. ಪಕ್ಷದ ಯುವಕರು, ಹಿರಿಯರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಮಂಜಪ್ಪ ಅವರು ಅಧ್ಯಕ್ಷರಾಗಿ ಆಯ್ಕೆ ಆಗಿದ್ದು ಸಂತಸ ನೀಡಿದೆ. ಅದೇ ರೀತಿಯಲ್ಲಿ ಚನ್ನಗಿರಿ ಕಾಂಗ್ರೆಸ್ ಮುಖಂಡ ವಡ್ನಾಳ್ ಜಗದೀಶ್ ಅವರಿಗೂ ಮಂಡಳಿ ಅಧ್ಯಕ್ಷಗಿರಿ ಸಿಕ್ಕಿದೆ. ಸಿಕ್ಕಿರುವ ಅವಕಾಶ ಬಳಸಿಕೊಂಡು ಉತ್ತಮ ಕೆಲಸ ನಿರ್ವಹಿಸಲಿ. ಪಕ್ಷ ವಹಿಸಿದ ಜವಾಬ್ದಾರಿ ಅಚ್ಚುಕಟ್ಟಾಗಿ ನಿಭಾಯಿಸಿ ಎಲ್ಲರ ಮನ ಗೆಲ್ಲಲಿ ಎಂದು ಹಾರೈಸಿದರು.

ಹೆಚ್. ಬಿ. ಮಂಜಪ್ಪ ಮತ್ತು ವಡ್ನಾಳ್ ಜಗದೀಶ್ ಅವರು ಮಾತನಾಡಿ, ಸೈಯದ್ ಸೈಫುಲ್ಲಾ ಅವರು ಹಿರಿಯ ಮುಖಂಡರು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪರು, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರಿಗೆ ಆಪ್ತರು. ಬೇರೆ ಪಕ್ಷದ ನಾಯಕರಾದ ಹೆಚ್. ಡಿ. ದೇವೇಗೌಡ, ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರೂ ಸೇರಿದಂತೆ ಇತರ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ರಾಜಕಾರಣಿ. ಆಶೀರ್ವಾದ ಪಡೆಯಲು ಬಂದಿದ್ದೇವೆ. ಖುಷಿ ನೀಡಿದೆ ಎಂದು ತಿಳಿಸಿದರು.

ಈ ವೇಳೆ ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್, ದಾವಣಗೆರೆ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಮತ್ತಿತರರು ಹಾಜರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಪ್ರಿಯಾಂಕ್ ಖರ್ಗೆ

ನಿಮ್ಮ ತಂದೆ, ನೀವು ಬೆಂಬಲಿಸುವ ನಕಲಿ ಗಾಂಧಿ ಕುಟುಂಬದಿಂದ ಆರ್ ಎಸ್ ಎಸ್ ನಿಷೇಧ ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆಗೆ ಸಾಲು ಸಾಲು ಪ್ರಶ್ನೆ ಕೇಳಿದ ಬಿಜೆಪಿ!

ರಾಶಿ

ಮಂಗಳವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2025: ಈ ರಾಶಿಯವರಿಗೆ ಧನ ಲಾಭ 

ಸಿದ್ದರಾಮಯ್ಯ

ಜಸ್ಟ್ ಡಿನ್ನರ್ ಅಷ್ಟೇ, ರಾಜಕೀಯ ಚರ್ಚೆ ಇಲ್ಲ: ಸಚಿವ ಸಂಪುಟ ಪುನರ್ರಚನೆ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ!

ದಾವಣಗೆರೆ

ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ದಾವಣಗೆರೆ

ದಾವಣಗೆರೆ ವಿವಿ ಅಂತರಕಾಲೇಜು ಭಾರ ಎತ್ತುವ ಸ್ಪರ್ಧೆ: ಹೊನ್ನೂರು ಗೊಲ್ಲರಹಟ್ಟಿ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

Leave a Comment