ದಾವಣಗೆರೆ: ಪೆಟ್ರೋಲ್, ಡೀಸೆಲ್, ಎಲ್ ಪಿಜಿ ದರ ಕೇವಲ ಹತ್ತು ದಿನಗಳಲ್ಲಿ ಮೂರು ಬಾರಿ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರವು ಜನರ ಮೇಲೆ ಗದಾಪ್ರಹಾರ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ ಅಚ್ಚೇ ದಿನ್ ಎಂದರೆ ಇದೇನಾ ಎಂದು ಕೆಪಿಸಿಸಿ ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕ ಹಾಗೂ ಕಾಂಗ್ರೆಸ್ ಎಸ್ಸಿ ಘಟಕದ ಉಪಾಧ್ಯಕ್ಷ ಬಿ. ಎನ್. ವಿನಾಯಕ್ ಕಿಡಿಕಾರಿದ್ದಾರೆ.
ದೇಶದ ಜನರು ಮೊದಲೇ ಆತಂಕದಲ್ಲಿದ್ದಾರೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವನ್ನೇ ನೆಪವಾಗಿಟ್ಟುಕೊಂಡು ಪದೇ ಪದೇ ಇಂಧನ ತೈಲ ಬೆಲೆ ಏರಿಕೆ ಹೆಚ್ಚಿಸುತ್ತಿರುವುದರಿಂದ ಜನಸಾಮಾನ್ಯರ ಬಳಸುವ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿಗಳನ್ನು ನೀಡಿ ಜನರ ಮನಗೆದ್ದಿದೆ. ಆದರೆ ಇದಕ್ಕೆ ಕೊಡಲಿ ಪೆಟ್ಟು ಕೊಡಬೇಕೆಂಬ ಷಡ್ಯಂತ್ರದಿಂದ ಇಂಧನ ಬೆಲೆ ಮತ್ತು ವಾಣಿಜ್ಯ ಗ್ಯಾಸ್ ಸಿಲಿಂಡರ್ ಒಂದಕ್ಕೆ ಒಂದು ಸಾವಿರ ರೂಪಾಯಿಯಷ್ಟು ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರದಿಂದ ಜನವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಬೆಲೆ ಏರಿಕೆಯ ಬಗ್ಗೆ ಮಾತನಾಡುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಸೆಸ್ ಕಡಿಮೆ ಮಾಡಿ ಎಂಬ ಉಪದೇಶ ನೀಡುವ ಬಿಜೆಪಿ ನಾಯಕರು ಉತ್ತರಿಸಲಿ, ಬಿಜೆಪಿ ಆಡಳಿತದ ಯಾವ ರಾಜ್ಯದಲ್ಲಿ ಸೆಸ್ ಕಡಿಮೆ ಮಾಡಲಾಗಿದೆ? ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಸ್ತಾನದಂತಹ ಬಿಜೆಪಿ ಆಳ್ವಿಕೆಯ ರಾಜ್ಯಗಳಿಗೆ ರಾಷ್ಟ್ರ ಹಿತ ಮುಖ್ಯವಾಗಿಲ್ಲವೇ? ಕರ್ನಾಟಕ ಸರ್ಕಾರಕ್ಕೆ ಮಾತ್ರ ಜನ ಹಿತ ಕಾಪಾಡುವ ಜವಾಬ್ದಾರಿ ಇದೆಯೇ, ಕೇಂದ್ರ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.
ಮೋದಿ ಅವರು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕಳೆದ 13 ವರ್ಷಗಳಲ್ಲಿ ಭಾರತಕ್ಕೆ ಮತ್ತು ಭಾರತೀಯರಿಗೆ ಒದಗಿದ ದುರ್ದಿನಗಳಂತಹ ಪರಿಸ್ಥಿತಿಯನ್ನು ಈ ದೇಶ ಹಿಂದೆಂದೂ ಕಂಡಿರಲಿಲ್ಲ. ಈಗಾಗಲೇ ಸಂಕಷ್ಟದಲ್ಲಿರುವ ಜನತೆಗೆ ಬೆಲೆ ಏರಿಕೆ
ಕಡಿಮೆಗೊಳಿಸಿ, ಜನಹಿತ ಕಾಪಾಡಬೇಕು. ಇಲ್ಲದಿದ್ದರೆ ದೇಶದ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿ. ಎನ್. ವಿನಾಯಕ್ ಅವರು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.
- BN Vinayak
- Central government policies
- Cess politics
- Commercial LPG cylinder price
- Congress Protest
- DAVANAGERE NEWS
- Fuel Price Hike
- KPCC
- Narendra Modi
- Petrol Diesel rates
- ಕಾಂಗ್ರೆಸ್ ಆಕ್ರೋಶ
- ಕೆಪಿಸಿಸಿ
- ಜನವಿರೋಧಿ ನೀತಿ
- ತೈಲ ಬೆಲೆ ಏರಿಕೆ
- ದಾವಣಗೆರೆ ಸುದ್ದಿ
- ನರೇಂದ್ರ ಮೋದಿ
- ಪೆಟ್ರೋಲ್ ಡೀಸೆಲ್ ದರ
- ಬಿ. ಎನ್. ವಿನಾಯಕ್
- ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ
- ಸೆಸ್ ರಾಜಕಾರಣ





Leave a comment