ದಾವಣಗೆರೆ: ಜಗಳೂರು ತಾಲ್ಲೂಕಿನ ಚಿಕ್ಕಮ್ಮನಹಟ್ಟಿ ಗ್ರಾಮದಲ್ಲಿ ಜಾತ್ರಾ ಮಹೋತ್ಸವದ ಪ್ರಯುಕ್ತ ಕೆರೆಯಲ್ಲಿ ಬೋಟ್ ರೈಡಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ವಿಶೇಷ ಸಂದರ್ಭದಲ್ಲಿ ಗ್ರಾಮದ ಮಹಿಳೆಯರೊಂದಿಗೆ ಬೋಟ್ ನಲ್ಲಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಕೆರೆ ವೀಕ್ಷಣೆ ಮಾಡಿದರು.
ದಿನನಿತ್ಯದ ಹೊಣೆಗಾರಿಕೆಗಳಿಂದ ಕ್ಷಣಕಾಲ ದೂರವಾಗಿ, ಎಲ್ಲರ ಜೊತೆಗೆ ನಗುವಿನೊಂದಿಗೆ ಸಂತಸದ ಕ್ಷಣಗಳನ್ನು ಹಂಚಿಕೊಂಡ ಈ ಅನುಭವವು ಅವಿಸ್ಮರಣೀಯವಾಗಿತ್ತು ಎಂದು ಹೇಳಿದ್ದಾರೆ.
ಇಂತಹ ಕಾರ್ಯಕ್ರಮಗಳು ಗ್ರಾಮೀಣ ಮಹಿಳೆಯರ ಮನಸ್ಸಿನಲ್ಲಿ ಆತ್ಮಸ್ಥೈರ್ಯ, ಸಂತೋಷ ಮತ್ತು ಸಮಾನತೆಯ ಭಾವನೆ ಮೂಡಿಸುವುದರ ಜೊತೆಗೆ, ಸಮಾಜದ ಒಗ್ಗಟ್ಟನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗಿ:
ಜಗಳೂರು ತಾಲ್ಲೂಕಿನ ಸೂರಗೊಂಡನಹಳ್ಳಿ ಗ್ರಾಮದಲ್ಲಿ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ದೇವಿಗೆ ವಿಶೇಷ ಪೂಜೆ–ಪುನಸ್ಕಾರಗಳನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.
ಈ ಪವಿತ್ರ ಸಂದರ್ಭದಲ್ಲಿ ಗ್ರಾಮಸ್ಥರನ್ನು ಭೇಟಿಯಾಗಿ ಅವರ ಸಮಸ್ಯೆಗಳು, ಅಗತ್ಯಗಳು ಹಾಗೂ ಗ್ರಾಮಾಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಚರ್ಚೆ ನಡೆಸಿದರು.
ದೇವಿಯ ಕೃಪೆಯಿಂದ ಗ್ರಾಮದಲ್ಲಿ ಶಾಂತಿ, ಸಮೃದ್ಧಿ ಹಾಗೂ ಸೌಹಾರ್ದತೆ ಸದಾ ನೆಲೆಸಲಿ ಎಂದು ಇದೇ ವೇಳೆ ಪ್ರಾರ್ಥಿಸಿದರು.





Leave a comment