ದಾವಣಗೆರೆ: ದಾವಣಗೆರೆ ನಗರ, ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಅಧೀನ ಗ್ರಂಥಾಲಯಗಳಿಗೆ ಪ್ರಸಕ್ತ ಸಾಲಿನಲ್ಲಿ ಸ್ಥಳೀಯ ಲೇಖಕರು ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ಖರೀದಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ನೋಂದಣಿಗಾಗಿ ನಿಗದಿತ ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಇಲಾಖಾ ಅಂತರ್ಜಾಲ (www.dpl.karnataka.gov.in) ಇ-ಮೇಲ್ ಮುಖಾಂತರ ಪಡೆಯಬಹುದು. ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ನಗರ ಕೇಂದ್ರ ಗ್ರಂಥಾಲಯ, ಎಸ್ ನಿಜಲಿಂಗಪ್ಪ ಬಡಾವಣೆ ಎಸ್.ಎಲ್.ಪಿ.ಯು ಕಾಲೇಜ್ ಹಿಂಬಾಗ ದಾವಣಗೆರೆ ಇವರನ್ನು ಸಂಪರ್ಕಿಸಬೇಕೆAದು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ತಿಳಿಸಿದ್ದಾರೆ.





Leave a comment