ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಜ್ಯದ ಜನರ ಆಕ್ರೋಶಕ್ಕೆ ಮಣಿಯಿತಾ ರಾಜ್ಯ ಸರ್ಕಾರ? ಬಿಪಿಎಲ್, ಎಪಿಎಲ್ ರದ್ದು ಮಾಡಲ್ಲವೆಂದು ಸ್ಪಷ್ಟನೆ!

On: November 19, 2024 5:06 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:19-11-2024

ಬೆಂಗಳೂರು: ಬಿಪಿಎಲ್, ಎಪಿಎಲ್ ಕಾರ್ಡ್ ಗಳ ರದ್ದು ವಿಚಾರ ವಿಪಕ್ಷಗಳಿಗೆ ಟೀಕೆ ಮಾಡಲು ಪ್ರಮುಖ ವಿಷಯವಾಗಿದೆ. ರಾಜ್ಯದ ವಿವಿಧೆಡೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಎಚ್ಚರಿಕೆಯ ನಡೆ ಇಡಲಾರಂಭಿಸಿದೆ.

ರಾಜ್ಯದಲ್ಲಿ ಯಾವುದೇ ಬಿಪಿಎಲ್‌, ಎಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡುವುದಿಲ್ಲ. ಬಿಪಿಎಲ್‌ಗೆ ಅರ್ಹರಲ್ಲದವರು, ತೆರಿಗೆದಾರರು, ಅನುಕೂಲಸ್ಥರನ್ನು ಎಪಿಎಲ್‌ಗೆ ಬದಲಾಯಿಸಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯ ಅವರು, ಬಿಪಿಎಲ್ ಕಾರ್ಡ್ ರದ್ದು ಪಡಿಸಲ್ಲ. ಅರ್ಹರಿಗೆ ಯಾವುದೇ ತೊಂದರೆ ಆಗದು. ಅಕ್ರಮವಾಗಿ ಪಡಿತರ ಚೀಟಿ ಪಡೆದವರದ್ದು ರದ್ದು ಆಗುತ್ತದೆ ಎಂದು ಸ್ಪಷ್ಟನೆ ನೀಡಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment