SUDDIKSHANA KANNADA NEWS/ DAVANAGERE/ DATE:20-08-2024
ಶಿವಮೊಗ್ಗ/ ದಾವಣಗೆರೆ: ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವುದು ಕಡ್ಡಾಯ.
ಆ.31ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7 ರಿಂದ ರಾತ್ರಿ 9ರವರೆಗೆ ಉಚಿತವಾಗಿ ಕೆವೈಸಿ ಮಾಡಿಸಿಕೊಳ್ಳುಬಹುದು.
ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ
ಉಪನಿರ್ದೇಶಕ ಅವಿನ್ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.