Site icon Kannada News-suddikshana

ಬಿಪಿಎಲ್ ಕಾರ್ಡ್‌ ಹೊಂದಿರುವವರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಉಚಿತ ಅಕ್ಕಿ ವಿತರಣೆ ಕುರಿತು ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಮತ್ತೊಂದು ಗುಡ್‌ನ್ಯೂಸ್ ನೀಡಿದೆ.

ಬಿಪಿಎಲ್ ಕಾರ್ಡುದಾರರಿಗೆ ಉಚಿತ ಅಕ್ಕಿ ನೀಡುವುದಕ್ಕಾಗಿ ಕರ್ನಾಟಕಕ್ಕೆ ಅಕ್ಕಿ ಪೂರೈಸಲು ಸಿದ್ಧವಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಭಾರತೀಯ ಆಹಾರ ನಿಗಮ (ಎಫ್‌ಸಿಐ) ಈ ಬಗ್ಗೆ ಘೋಷಣೆ ಮಾಡಿದೆ. ಹೀಗಾಗಿ ಫಲಾನುಭವಿಗಳಿಗೆ ಈಗ ನೀಡುತ್ತಿರುವ 170 ರೂಪಾಯಿಗಳ ಬದಲಿಗೆ 5 ಕೆಜಿ ಅಕ್ಕಿ ಹೆಚ್ಚು ಸಿಗಲಿದೆ. ರಾಜ್ಯ ಸರ್ಕಾರ ಮಾಡಿದ್ದ ಮನವಿಯನ್ನು ಕೇಂದ್ರ ಸರ್ಕಾರ ಕಳೆದ ವರ್ಷ ತಿರಸ್ಕರಿಸಿತ್ತು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವೆ ವಾಕ್ಸಮರಕ್ಕೆ ಕೂಡಾ ಕಾರಣವಾಗಿತ್ತು.

ಆದರೆ, ಇದೀಗ ಕೇಂದ್ರ ಸರ್ಕಾರ ನಿರ್ಧಾರ ಬದಲಾಯಿಸಿದೆ. ಈ ಕಾರಣದಿಂದ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಗಾಗಿ 2.38 ಲಕ್ಷ ಟನ್ ಅಕ್ಕಿಯನ್ನು ಪೂರೈಸಲು ಮನವಿ ಮಾಡಿದೆ. ಅದನ್ನು ಪೂರೈಸಲು ನಾವು ಸಿದ್ಧರಿದ್ದೇವೆ ಎಂದು ಎಫ್‌ಸಿಐನ ಬೆಂಗಳೂರಿನ ಪ್ರಾದೇಶಿಕ ಕಚೇರಿಯ ಪ್ರಧಾನ ವ್ಯವಸ್ಥಾಪಕ ಮಹೇಶ್ವರಪ್ಪ ಬಿಒ ತಿಳಿಸಿದ್ದಾರೆ.

Exit mobile version