SUDDIKSHANA KANNADA NEWS/ DAVANAGERE/ DATE:10-03-2025
ಬೆಂಗಳೂರು: ಬಿಪಿಎಲ್ ಕಾರ್ಡ್ ಪಡೆದಿರುವ ಅನರ್ಹರಿಗೆ ಶಾಕ್ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿಯಮಾವಳಿ ಉಲ್ಲಂಘಿಸಿ ಸಾಕಷ್ಟು ಮಂದಿ ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ಹಾಗಾಗಿ, ಇದಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಯೋಜನೆಯೊಂದನ್ನು
ಹಾಕಿಕೊಂಡಿದೆ.
ಸದ್ಯದಲ್ಲಿಯೇ ಅನರ್ಹರಿಗೆ ಬಿಸಿ ಮುಟ್ಟಿಸುವ ಕೆಲಸ ನಡೆಯಲಿದೆ. ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಅವರಿಗೆ ಸಿಗುತ್ತಿರುವ ಸೌಲಭ್ಯವನ್ನು ಅರ್ಹರಿಗೆ ದೊರಕಿಸಿಕೊಡುವ ಸದುದ್ದೇಶದಿಂದ ಗ್ರಾಮ ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. ಈ ಮೂಲಕ ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್ ದಾರರ ರದ್ದತಿಗೆ ಕಠಿಣ ಕ್ರಮ ತೆಗೆದುಕೊಂಡಿದೆ.