ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬ್ರೆಜಿಲ್ ನಲ್ಲಿ ವಿಮಾನ ಪತನ; 61 ಮಂದಿ ಧಾರುಣ ಸಾವು- ವಿಡಿಯೊ ವೈರಲ್

On: August 10, 2024 10:39 AM
Follow Us:
---Advertisement---

ಸಾವೊ ಪೌಲೊ : ಬ್ರೆಜಿಲ್ ನಲ್ಲಿ ವಿಮಾನವೊಂದು ಜನವಸತಿ ಪ್ರದೇಶದ ಮೇಲೆ ಪತನಗೊಂಡಿದ್ದು, ಸುಮಾರು 61ಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ. ಬ್ರೆಜಿಲ್‌ ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೊಪಾಸ್ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನದಲ್ಲಿ 57 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯಿದ್ದರು. ದುರಂತದಲ್ಲಿ ಯಾರೂ ಬದುಕುಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಸ್ಕಾವೇಲ್ ನಗರದಿಂದ ಸೌವೊ ಪೌಲೋ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ Voepass ಏರ್‌ಲೈನ್ಸ್‌ನ ATR-72 ವಿಮಾನ ವಿನೆದೊ ನಗರದ ಜನವಸತಿ ಪ್ರದೇಶದಲ್ಲಿ ಶುಕ್ರವಾರ ಪತನಗೊಂಡಿದೆ. ಇದರಿಂದ ಸಿಬ್ಬಂದಿ ಸೇರಿ 61 ಜನ ಮೃತಪಟ್ಟಿದ್ದಾರೆ.

ವಿಮಾನ ನೆಲಕ್ಕೆ ಅಪ್ಪಳಿಸುವ ಮುನ್ನ ನೇರವಾಗಿ ಚಲಿಸದೇ ಆಕಾಶದಲ್ಲೇ ಗಿರಕಿ ಹೊಡೆಯುತ್ತಾ ವೇಗವಾಗಿ ನೆಲಕ್ಕೆ ಅಪ್ಪಳಿಸಿದೆ. ಈ ಆತಂಕಕಾರಿ ವಿಡಿಯೊ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.
ಗಿರಕಿ ಹೊಡೆಯುತ್ತಾ ಪತನವಾದ ಬ್ರೆಜಿಲ್‌ನ ಈ ವಿಮಾನ ಪತನ ಪ್ರಪಂಚದ ವಿಮಾನಯಾನ ತಜ್ಞರಿಗೆ ಆಶ್ಚರ್ಯ ತರಿಸಿದೆ. ಘಟನೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಹವಾಮಾನ ವೈಪರಿತ್ಯದಿಂದ ಪೈಲಟ್‌ ಎಂಜಿನ್ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಿರಬಹುದು ಎಂದು ಶಂಕಿಸಲಾಗಿದೆ.

Join WhatsApp

Join Now

Join Telegram

Join Now

Leave a Comment