ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಗೊಲ್ಲರು-ಕಾಡುಗೊಲ್ಲ ಹೆಣ್ಣು ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತನ್ನಿ: ಕೆ.ಎಸ್.ಬಸವಂತಪ್ಪ ಒತ್ತಾಯ

On: March 5, 2025 6:47 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:05-03-2025

ದಾವಣಗೆರೆ: ಗೊಲ್ಲರು ಮತ್ತು ಕಾಡುಗೊಲ್ಲ ಸಮುದಾಯದ ಹೆಣ್ಣು ಮಕ್ಕಳಿಗೆ ಸಂಪ್ರದಾಯದ ವಿಚಾರದಲ್ಲಿ ಆಗುತ್ತಿರುವ ಸಾಮಾಜಿಕ ಅಡೆತಡೆ ಹಾಗೂ ಆರೋಗ್ಯ ತೊಂದರೆಗಳ ಕುರಿತು ಸರ್ಕಾರ ಜಾಗೃತಿ ಮೂಡಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಸರ್ಕಾರವನ್ನು ಆಗ್ರಹಿಸಿದರು.

ವಿಧಾನಸೌಧದಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಶಾಸಕ ಶಿವಲಿಂಗೇಗೌಡ ಈ ವಿಷಯ ಕುರಿತು ಪ್ರಸ್ತಾಪಿಸಿದರು. ಇದಕ್ಕೆ ಧ್ವನಿಗೂಡಿಸಿದ ಶಾಸಕ ಕೆ.ಎಸ್.ಬಸವಂತಪ್ಪ, ಈ ಸಮುದಾಯದಲ್ಲಿ ಬೇರು ಬಿಟ್ಟಿರುವ ಮೂಢನಂಬಿಕೆ ಹಾಗೂ ಹಲವು ಸಂಪ್ರದಾಯದಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಸರ್ಕಾರ ಹಿಂದುಳಿದ ವರ್ಗಗಳ ಇಲಾಖೆ ಮೂಲಕ ಜಾಗೃತಿ ಮೂಡಿಸುತ್ತಿದೆ. ಇದಕ್ಕಾಗಿ ಪ್ರತಿವರ್ಷ ಇಂತಿಷ್ಟು ಅನುದಾನವನ್ನೂ ಮೀಸಲಿಡುತ್ತಿದೆ. ಆದರೆ ಮೌಢ್ಯತೆಗೆ ಒಳಗಾಗಿರುವ ಸಮುದಾಯವನ್ನು ಶಾಶ್ವತವಾಗಿ ಹೊರ ತರಲು ಆಗಿಲ್ಲ. ಈ ಬಗ್ಗೆ ಸರ್ಕಾರ ಜಾಗೃತಿ ಮೂಡಿಸುವ ಕಾರ್ಯಕ್ರಮಗಳ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕೆಂದು ಮನವಿ ಮಾಡಿದರು.

ಕೆಲ ವರ್ಷಗಳ ಹಿಂದೆ ಗೊಲ್ಲರು ಮತ್ತು ಕಾಡುಗೊಲ್ಲ ಸಮುದಾಯದಲ್ಲಿ ಋತುಮತಿಯಾದ ಹೆಣ್ಣು ಮಕ್ಕಳನ್ನು ಹೊರಕ್ಕೆ ಕೂರಿಸುತ್ತಿದ್ದ ಕುರಿತು ಸಾಕಷ್ಟು ಚರ್ಚೆಗಳಾಗಿದ್ದವು. ಈಗ ಬಾಣಂತಿ ಹಾಗೂ ಎಳೆಯ ಮಕ್ಕಳನ್ನು ಮನೆಯಿಂದ ಹೊರಗಿಡುವ ಬಗ್ಗೆ ವರದಿಗಳು ಕೂಡ ಬರುತ್ತಿವೆ. ಈ ಸಮಾಜದ ಅಭಿವೃದ್ಧಿಗಾಗಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ. ಆದರೆ ಇನ್ನೂ ಸಮಾಜ ಅಭಿವೃದ್ಧಿ ಆಗಿಲ್ಲ. ನಿಗಮದ ಮೂಲಕ ಸಾಲಸೌಲಭ್ಯ, ಈ ಸಮುದಾಯದ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಅವರನ್ನು ಮೌಢ್ಯತೆಯಿಂದ ಹೊರ ತರುವ ಕೆಲಸ ಸರ್ಕಾರ ಮಾಡಬೇಕೆಂದು ಒತ್ತಾಯಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment