
ನವದೆಹಲಿ: ಬಿಎಸ್ಎಫ್ ನಲ್ಲಿ (Border Security Force – BSF) ವೃತ್ತಿಜೀವನವನ್ನು ಎದುರು ನೋಡುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣ ಅವಕಾಶವೊಂದು ಲಭ್ಯವಿದೆ.
ಬಾರ್ಡರ್ ಸೆಕ್ಯುರಿಟಿ ಫೋರ್ಸ್ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ದೇಶಾದ್ಯಂತ ಒಟ್ಟು 1,167 ಸಬ್ ಇನ್ಸ್‌ಪೆಕ್ಟರ್ (Sub-Inspector) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿಸೆಂಬರ್ 31, 2026ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 35,400 ರಿಂದ ರೂ. 1,12,400 ರವರೆಗೆ ವೇತನ ದೊರೆಯಲಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ ಎಂಬುದು ಅಭ್ಯರ್ಥಿಗಳಿಗೆ ಮತ್ತೊಂದು ಒಳ್ಳೆಯ ಸುದ್ದಿಯಾಗಿದೆ.
ವಿದ್ಯಾರ್ಹತೆ ಮತ್ತು ವಯೋಮಿತಿ: ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಲಿಯಿಂದ ಪದವಿ (Degree) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 32 ವರ್ಷಗಳಾಗಿರಬೇಕು (ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ).
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ (CBT Mode), ದೈಹಿಕ ದಕ್ಷತಾ ಪರೀಕ್ಷೆ (PET), ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ನಡೆಸಲಾಗುತ್ತದೆ.
ಪ್ರಮುಖ ದಿನಾಂಕಗಳು: ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯು ನವೆಂಬರ್ 12, 2026ರಂದು ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 31, 2026 ಕೊನೆಯ ದಿನವಾಗಿದೆ.
Official Website: bsf.nic.in




