Home ದಾವಣಗೆರೆ ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಗೆಲುವು ಖಚಿತ ಎಂದ ಬಿ. ಎಸ್. ಯಡಿಯೂರಪ್ಪ
ದಾವಣಗೆರೆಬೆಂಗಳೂರು

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಗೆಲುವು ಖಚಿತ ಎಂದ ಬಿ. ಎಸ್. ಯಡಿಯೂರಪ್ಪ

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಹಾಗಾಗಿ, ಈ ಬಾರಿ ಬಿಜೆಪಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಶ್ರೀನಿವಾಸ್ ದಾಸಕರಿಯಪ್ಪ ಅವರಿಗೆ ಭಾರೀ ಬೆಂಬಲ ಇದೆ. ಎಲ್ಲೆಡೆ ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯು ಈ ಬಾರಿ ಕಾಂಗ್ರೆಸ್ ಸೋಲಿಸಿ ಇತಿಹಾಸ ಬರೆಯಲಿದೆ ಎಂದು ಹೇಳಿದರು.

25 ಸಾವಿರ ಅಂತರದಲ್ಲಿ ಗೆಲ್ತೇವೆ:

ಇನ್ನು ಮಾಜಿ ಸಂಸದ ಡಾ. ಜಿ. ಎಂ. ಸಿದ್ದೇಶ್ವರ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಶ್ರೀನಿವಾಸ್ ದಾಸಕರಿಯಪ್ಪ ಅವರು ಸುಮಾರು 25 ಸಾವಿರ ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ ಎಂದು ತಿಳಿಸಿದರು.

Share

Leave a comment

Leave a Reply

Your email address will not be published. Required fields are marked *