ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

130 ಸ್ಥಾನ ಪಡೆದು ಮತ್ತೆ ಅಧಿಕಾರಕ್ಕೆ ಬರುತ್ತೇವೆ: ಯಡಿಯೂರಪ್ಪ ವಿಶ್ವಾಸ

On: May 5, 2023 12:10 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:05-05-2023

ದಾವಣಗೆರೆ (DAVANAGERE): ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ (BJP)130ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಅಧಿಕಾರಕ್ಕೆ ಬರುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ (CHIEF MINISTER) ಬಿ. ಎಸ್. ಯಡಿಯೂರಪ್ಪ ಹೇಳಿದರು.

ನಗರದ ಜಿಎಂಐಟಿ(GMIT)ಯಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದ ಯಡಿಯೂರಪ್ಪ, ಬೆಳಿಗ್ಗೆ ಮಾಧ್ಯಮದವರ ಜೊತೆ ಮಾತನಾಡಿದರು. ಈ ಬಾರಿ ಎಲ್ಲೆಡೆ ಬಿಜೆಪಿ (BJP)ಪರ ಅಲೆ ಇದೆ. ಪ್ರಧಾನಿ ನರೇಂದ್ರ ಮೋದಿ(MODI) ರೋಡ್ ಶೋ, ಸಾರ್ವಜನಿಕ ಸಭೆಗಳು, ಕೇಂದ್ರ ಸಚಿವ ಅಮಿತ್ ಶಾರ ರಾಜ್ಯ ಚುನಾವಣಾ ಪ್ರಚಾರಗಳು ನಮಗೆ ಅನುಕೂಲವಾಗಲಿದೆ ಎಂದು ಹೇಳಿದರು.

ನಾನು ಸಂಚಾರ ಮಾಡುತ್ತಿದ್ದೇನೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಯಾವುದೇ ಕಾರಣಕ್ಕೂ ಸ್ಪಷ್ಟ ಬಹುಮತ ಪಡೆಯುವುದಿಲ್ಲ. ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ಹಗಲುಕನಸು ಕಾಣುತ್ತಿರುವ ಕಾಂಗ್ರೆಸ್ ಅನ್ನು ನಂಬುವ ಪರಿಸ್ಥಿತಿಯಲ್ಲಿ ರಾಜ್ಯದ ಜನರಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ವಿರುದ್ಧ ಕಿಡಿ: 

ಕಾಂಗ್ರೆಸ್ (CONGRESS) ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುವ ಪ್ರಸ್ತಾಪವನ್ನು ಪ್ರಣಾಳಿಕೆಯಲ್ಲಿ ಮಾಡಿದೆ. ಯಾರೋ ತಲೆ ಸರಿ ಇಲ್ಲದವರು ಈ ರೀತಿ ಮಾಡಿರಬಹುದು. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಬಜರಂಗದಳ ನಿಷೇಧ ಮಾಡುವ ಪ್ರಶ್ನೆಯೇ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಎಸ್ ವೈ ಸಭೆ: ಜಿಎಂಐಟಿಯಲ್ಲಿ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ರಣತಂತ್ರ ರೂಪಿಸಿದರು. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲೋಕಿಕೆರೆ ನಾಗರಾಜ್, ಸಂಸದ ಜಿ. ಎಂ. ಸಿದ್ದೇಶ್ವರ, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ದೇವರಮನಿ ಶಿವಕುಮಾರ್, ಸತೀಶ್, ಸಂಸದ ಸಿದ್ದೇಶ್ವರರ ಪುತ್ರ ಅನಿತ್ ಸೇರಿದಂತೆ ಮುಖಂಡರು ಹಾಜರಿದ್ದರು.

ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಬಗ್ಗೆ ಮಾಹಿತಿ ಪಡೆದ ಬಿಎಸ್ ವೈ, ಎಲ್ಲೆಲ್ಲಿ ಏನೂ ಸಮಸ್ಯೆ ಇದೆ. ಅದನ್ನ ಪರಿಹರಿಸಿಕೊಂಡು ಮುನ್ನೆಡೆಯಿರಿ. ಬಿಜೆಪಿ ಅಭ್ಯರ್ಥಿಗಳು ಗೆಲ್ಲುವಂತೆ ಕಾರ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment