ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬಿಎಸ್‌ವೈ ಪೋಕ್ಸೋ ಪ್ರಕರಣ: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

On: January 7, 2025 6:35 PM
Follow Us:
---Advertisement---

ಧಾರವಾಡ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಜ.10ಕ್ಕೆ ಮುಂದೂಡಿದೆ.

ನ್ಯಾ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಪ್ರಕರಣದ ವಿಚಾರಣೆ ನಡೆಸಿತು. ಹಿರಿಯ ವಕೀಲ ಸಿ.ವಿ.ನಾಗೇಶ ಅವರು ಬಿ.ಎಸ್.ಯಡಿಯೂರಪ್ಪ ಅವರ ಪರವಾಗಿ ವಾದ ಮಂಡಿಸಿದರು. ಆದರೆ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನಲ್ಲಿಯೇ ನಡೆಸುವಂತೆ ಸೂಚಿಸಿದ ನ್ಯಾಯಮೂರ್ತಿಗಳು ಮುಂದಿನ ವಿಚಾರಣೆ ಜ.10ಕ್ಕೂ ಮುಂದೂಡಿದರು.

ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಠಿಸಿದ್ದ ಈ ಪ್ರಕರಣದಲ್ಲಿ ಬಿ.ಎಸ್.ವೈ ಭಾಗಿಯಾಗಿರುವ ಆರೋಪವನ್ನು ಎದುರಿಸುತ್ತಿದ್ದು, ಈ ಪೋಕ್ಸೋ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿ.ಎಸ್.ಯಡಿಯೂರಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈವರೆಗೂ ಬೆಂಗಳೂರಿನಲ್ಲಿಯೇ ನಡೆದಿದ್ದ ಈ ಪ್ರಕರಣ ವಿಚಾರಣೆ ಮಂಗಳವಾರ ಮಾತ್ರ ಧಾರವಾಡ ಹೈಕೋರ್ಟ್‌ನಲ್ಲಿ ನಡೆಯಿತು.

 

Join WhatsApp

Join Now

Join Telegram

Join Now

Leave a Comment