SUDDIKSHANA KANNADA NEWS/ DAVANAGERE/ DATE_04-07_2025
ದಾವಣಗೆರೆ: ಯಾವುದೇ ಕಾರಣಕ್ಕೂ ಬಹಿರಂಗವಾಗಿ ಮಾತನಾಡಬೇಡ. ಏನೇ ಇದ್ದರೂ ನಾಲ್ಕು ಗೋಡೆಗಳ ಮಧ್ಯೆ ಮಾತನಾಡು. ಮಾಧ್ಯಮಗಳಲ್ಲಿ ಮಾತನಾಡಿ ಗೊಂದಲ ಸೃಷ್ಟಿಸಬೇಡ. ಚರ್ಚಿಸುವುದಿದ್ದರೆ ನಮ್ಮ ಬಳಿ ಬಾ. ಇನ್ಮುಂದೆ ಬಹಿರಂಗ ಹೇಳಿಕೆ ಕೊಡಬೇಡ. ಇದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಎಂ.ಪಿ. ರೇಣುಕಾಚಾರ್ಯ ರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
READ ALSO THIS STORY: ಭದ್ರಾ ಡ್ಯಾಂ (Bhadra Dam) ನೀರು ಸಂಗ್ರಹಿಸದೇ ನದಿಗೆ ನೀರು ಬಿಡುಗಡೆ ಯಾಕೆ: ಅಚ್ಚುಕಟ್ಟು ವ್ಯಾಪ್ತಿಯ ರೈತರ ಪ್ರಶ್ನೆಗೆ ಅಧಿಕಾರಿಗಳ ಸ್ಪಷ್ಟನೆ!
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿರುವ ರೇಣುಕಾಚಾರ್ಯ, ನಾವು ಏನಿದ್ದರೂ ನಾಲ್ಕು ಗೋಡೆಗಳ ಮಧ್ಯೆಯೇ ಮಾತನಾಡುತ್ತೇವೆ. ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ.
ನಮ್ಮ ನೋವು, ಸಮಸ್ಯೆ, ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರು ಯಾರು? ನಾವು ಪಕ್ಷದ ಅಧ್ಯಕ್ಷರು, ಯಡಿಯೂರಪ್ಪರ ಪರ ಮಾತನಾಡಿದರೆ ಪಕ್ಷ ವಿರೋಧಿ ಚಟುವಟಿಕೆಯೇ? ರಾಜ್ಯಾಧ್ಯಕ್ಷರ ವಿರುದ್ಧ ರಾಜ್ಯಮಟ್ಟದಲ್ಲಿ
ಸಭೆ ನಡೆಸಿ ಪಕ್ಷಕ್ಕೆ ಮುಜುಗರ ತಂದವರ ಬಗ್ಗೆ ಮಾತನಾಡಿದ್ದೇವೆ ಎಂದು ಹೇಳಿದರು.
ನಾವು ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ರಾಜ್ಯಾಧ್ಯಕ್ಷರು, ಯಡಿಯೂರಪ್ಪರ ವಿರುದ್ಧ ಮಾತನಾಡಿದರೆ ಬಿಜೆಪಿ ವಿರುದ್ಧ ಟೀಕೆ ಮಾಡಿದಂತೆ. ನಾವು ರಾಜ್ಯಾಧ್ಯಕ್ಷರ ಪರ ಇದ್ದೇವೆ. ಇದರಲ್ಲಿ ಎರಡು ಮಾತಿಲ್ಲ. ಮಾಧ್ಯಮಗಳಲ್ಲಿ
ಮಾತನಾಡಿ ಪಕ್ಷಕ್ಕೆ ಡ್ಯಾಮೇಜ್ ಮಾಡಿದ್ದು ಅವರು, ನಾವಲ್ಲ. ಎಲ್ಲವನ್ನೂ ಬಹಿರಂಗವಾಗಿ ಮಾತನಾಡಲ್ಲ. ಮಾತನಾಡಬಾರದು ಎಂದು ಸೂಚನೆ ಕೊಟ್ಟಿದ್ದಾರೆ ಎಂದು ರೇಣುಕಾಚಾರ್ಯ ಹೇಳಿದರು
ಈ ವೇಳೆ ಲೋಕಿಕೆರೆ ನಾಗರಾಜ್, ಅಜಯ್ ಕುಮಾರ್, ಮಾಡಾಳ್ ಮಲ್ಲಿಕಾರ್ಜುನ್, ಬಸವರಾಜ್ ನಾಯ್ಕ್ ಮತ್ತಿತರರು ಹಾಜರಿದ್ದರು.