Home ದಾವಣಗೆರೆ ಕರ್ನಾಟಕ ಬಜೆಟ್ 2026: ರೈತರ ಸಮೃದ್ಧಿಗಾಗಿ ‘ಮುಖ್ಯಮಂತ್ರಿ ಕೃಷಿ ವಿಸ್ತಾರ’ ಮತ್ತು ‘ವಸುಧಾಮೃತ’ ಯೋಜನೆಗಳ ಘೋಷಣೆ
ದಾವಣಗೆರೆನವದೆಹಲಿಬೆಂಗಳೂರುವಾಣಿಜ್ಯ

ಕರ್ನಾಟಕ ಬಜೆಟ್ 2026: ರೈತರ ಸಮೃದ್ಧಿಗಾಗಿ ‘ಮುಖ್ಯಮಂತ್ರಿ ಕೃಷಿ ವಿಸ್ತಾರ’ ಮತ್ತು ‘ವಸುಧಾಮೃತ’ ಯೋಜನೆಗಳ ಘೋಷಣೆ

Share
ಕರ್ನಾಟಕ
Share

ಬೆಂಗಳೂರು: “ರೈತ ಸಮೃದ್ಧನಾದರೆ ಕರ್ನಾಟಕ ಸಮೃದ್ಧವಾಗುತ್ತದೆ” ಎಂಬ ದೃಢ ನಂಬಿಕೆಯೊಂದಿಗೆ ರಾಜ್ಯ ಸರ್ಕಾರವು ಕೃಷಿ ವಲಯದ ಸರ್ವತೋಮುಖ ಅಭಿವೃದ್ಧಿಗೆ ನಾಲ್ಕು ಪ್ರಮುಖ ಆಧಾರಸ್ತಂಭಗಳ ಕೃಷಿ ತಂತ್ರಜ್ಞಾನವನ್ನು ಘೋಷಿಸಿದೆ. ಕೃಷಿ ಉತ್ಪಾದಕತೆ ಹೆಚ್ಚಿಸಲು ಮತ್ತು ರೈತರ ಆರ್ಥಿಕ ಸ್ವಾವಲಂಬನೆಗಾಗಿ ಅತ್ಯಾಧುನಿಕ AI ತಂತ್ರಜ್ಞಾನ ಹಾಗೂ ಸುಸ್ಥಿರ ಕೃಷಿ ಪದ್ಧತಿಗಳಿಗೆ ಈ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ. ಕರ್ನಾಟಕ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. 

ಪ್ರಮುಖ ಮುಖ್ಯಾಂಶಗಳು:

ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ:

ಉತ್ಪಾದನೋತ್ತರ ಕೃಷಿ ಚಟುವಟಿಕೆಗಳು, ಸಂಸ್ಕರಣೆ ಮತ್ತು ಮಾರುಕಟ್ಟೆ ಸಂಪರ್ಕ ಬಲಪಡಿಸಲು ಮುಂದಿನ 3 ವರ್ಷಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಜಾರಿಯಾಗಲಿದೆ.

ವಸುಧಾಮೃತ ಕಾರ್ಯಕ್ರಮ:

ಮಣ್ಣಿನ ಸಾವಯವ ಇಂಗಾಲ ಮತ್ತು ಫಲವತ್ತತೆ ಹೆಚ್ಚಿಸಿ ಸುಸ್ಥಿರ ಕೃಷಿ ಉತ್ತೇಜಿಸಲು ಈ ಹೊಸ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.

ಸಸ್ಯ ಸಂಜೀವಿನಿ:

ಬೆಳೆಗಳಿಗೆ ತಗುಲುವ ಕೀಟ ಮತ್ತು ರೋಗಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಹಾಗೂ ಜೈವಿಕ ಪೀಡೆನಾಶಕಗಳ ಬಳಕೆಗೆ ಈ ಯೋಜನೆಯಡಿ ಉತ್ತೇಜನ ನೀಡಲಾಗುತ್ತದೆ.

AI ಆಧಾರಿತ ರೈತ ಕರೆ ಕೇಂದ್ರ:

ರೈತರಿಗೆ ಹವಾಮಾನ ಮತ್ತು ಮಾರುಕಟ್ಟೆ ಮಾಹಿತಿ ತ್ವರಿತವಾಗಿ ಒದಗಿಸಲು ಕೃಷಿ ಇಲಾಖೆಯ ಕರೆ ಕೇಂದ್ರವನ್ನು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದೊಂದಿಗೆ ಮೇಲ್ದರ್ಜೆಗೇರಿಸಲಾಗುವುದು.

ರೈತ ಮಾಲ್ (Farmer Malls):

ರೈತರಿಗೆ ಗುಣಮಟ್ಟದ ಬೀಜ, ಗೊಬ್ಬರ ಮತ್ತು ಯಂತ್ರೋಪಕರಣಗಳನ್ನು ಒಂದೇ ಸೂರಿನಡಿ ಒದಗಿಸಲು ಕೋಲಾರ ಜಿಲ್ಲೆಯ ಪ್ರತಿಯೊಂದು ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ MSIL ವತಿಯಿಂದ ರೈತ ಮಾಲ್‌ಗಳನ್ನು ಸ್ಥಾಪಿಸಲಾಗುವುದು.

ಸಾವಯವ ತಾಲ್ಲೂಕು:

ಮಂಡ್ಯ ಜಿಲ್ಲೆಯ ಪಾಂಡವಪುರವನ್ನು ಸಂಪೂರ್ಣ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸಲು ಸರ್ಕಾರ ನಿರ್ಧರಿಸಿದೆ.

ಸರ್ಕಾರವು ಕಳೆದ ಮೂರು ವರ್ಷಗಳಲ್ಲಿ 51 ಲಕ್ಷ ರೈತರಿಗೆ 6,213 ಕೋಟಿ ರೂ. ಬೆಳೆ ವಿಮೆ ಮತ್ತು 83 ಲಕ್ಷ ರೈತರಿಗೆ 70 ಸಾವಿರ ಕೋಟಿ ರೂ. ಶೂನ್ಯ ಬಡ್ಡಿ ದರದ ಸಾಲ ವಿತರಿಸಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles