SUDDIKSHANA KANNADA NEWS/ DAVANAGERE/ DATE:07-03-2025
ದಾವಣಗೆರೆ: ಸಿಎಂ ಸಿದ್ದರಾಮಯ್ಯರು ಮಂಡನೆ ಮಾಡಿರುವ ಆಯವ್ಯಯದಲ್ಲಿ ಕ್ರಾಂತಿಕಾರಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಇದೊಂದು ಸಮತೋಲಿತ ಬಜೆಟ್ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಘಟಕದ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ, ಶಕ್ತಿ, ಗೃಹ ಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಸೇರಿ ಗ್ಯಾರಂಟಿ ಯೋಜನೆಗಳ ಹೊರೆ ತಪ್ಪಿಸಿಕೊಳ್ಳುವ ಜೊತೆಗೆ ಎಲ್ಲಾ ವರ್ಗದವರಿಗೆ ಅನುಕೂಲಕರ ಆಯವ್ಯಯ ಮಂಡನೆ ಮಾಡಿದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮಂಡನೆ ಮಾಡಿರುವ ಬಜೆಟ್ ಇದಾಗಿದೆ ಎಂದು ಹೇಳಿದ್ದಾರೆ.
ಇ-ಪೌತಿ ಆಂದೋಲನ, ಮಾತೃಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು ರಾಜ್ಯದ 4,000 ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ವಿಭಾಗವನ್ನು ಪ್ರಾರಂಭ, ಪ್ರಾದೇಶಿಕ ಅಸಮತೋಲನೆ, ಉತ್ಸಾಹಿ ಕೈಗಳಿಗೆ ಕೌಶಲ್ಯದ ಬಲ, ತಂತ್ರಜ್ಞಾನ,
ಕಾರ್ಮಿಕರು, ಮಹಿಳೆಯರು, ಯುವವರ್ಗ, ರೈತರು ಸೇರಿದಂತೆ ಪ್ರತಿಯೊಂದು ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಹಲವು ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ. ಅತ್ಯುತ್ತಮ ಮತ್ತು ಅಭಿವೃದ್ಧಿಗೆ ಪೂರಕವಾಗಿರವ ಬಜೆಟ್ ಆಗಿದೆ ಎಂದು
ತಿಳಿಸಿದ್ದಾರೆ. .
ಅಲ್ಪಸಂಖ್ಯಾತ ಸಮುದಾಯದ ಅಭ್ಯುದಯಕ್ಕೆ ನೆರವು ನೀಡಿರುವುದು ಸ್ವಾಗತಾರ್ಹ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಕ್ರಮ, ಸರ್ಕಾರಿ ಶಾಲೆಗಳು, ಕಾಲೇಜುಗಳು, ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲಕರ ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ. ಇದೊಂದು ಅತ್ಯುತ್ತಮ, ಅಮೂಲಾಗ್ರ ಬದಲಾವಣೆ ತರುವ ಆಯವ್ಯಯ ಎಂದು ಪತ್ರಿಕಾ ಹೇಳಿಕೆಯಲ್ಲಿ ಸೈಯದ್ ಖಾಲಿದ್ ಅಹ್ಮದ್ ಅವರು ಬಣ್ಣಿಸಿದ್ದಾರೆ.