SUDDIKSHANA KANNADA NEWS/ DAVANAGERE/ DATE:24-02-2024
ದಾವಣಗೆರೆ: ನಗರದ ಮಹಾನಗರಪಾಲಿಕೆಯಲ್ಲಿ ಫೆ. 26 ರಂದು ಮಧ್ಯಾಹ್ನ 3 ಗಂಟೆಗೆ ಮಹಾನಗರಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ಮಹಾನಗರಪಾಲಿಕೆಯ ಮಹಾಪೌರರಾದ ವಿನಾಯಕ ಬಿ.ಎಚ್ ಅವರ ಅಧ್ಯಕ್ಷತೆಯಲ್ಲಿ ಪ್ರಸಕ್ತ ಸಾಲಿನ ಆಯ-ವ್ಯಯ ಸಭೆಯನ್ನು ಆಯೋಜಿಸಲಾಗಿದೆ ಎಂದು ಪಾಲಿಕೆಯ ಪರಿಷತ್ ಕಾರ್ಯದರ್ಶಿ ತಿಳಿಸಿದ್ದಾರೆ.
ಮಾ.4 ರಂದು ಬಹಿರಂಗ ಹರಾಜು:
ದಾವಣಗೆರೆ: ಮುಟ್ಟುಗೋಲು ಹಾಕಿಕೊಂಡಿರುವ 1 ಗ್ಯಾಸ್ ಫಿಲ್ಲಿಂಗ್ ಮಿಷನ್, 2 ಎಲೆಕ್ಟ್ರಾನಿಕ್ ತೂಕದ ಯಂತ್ರ ಮತ್ತು ಗ್ಯಾಸ್ ರಿಫಿಲ್ಲಿಂಗ್ ಮಾಡುವ 1 ಕಡ್ಡಿಯನ್ನು ಹರಾಜು ಮಾಡಲು ಮಾ.4 ರಂದು ಬೆಳಿಗ್ಗೆ 11 ಗಂಟೆಗೆ ಸಹಾಯಕ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಇಲಾಖೆ, ತಾಲ್ಲೂಕು ಕಚೆೇರಿ ಆವರಣ ದಾವಣಗೆರೆ ಸಹಾಯಕ ನಿರ್ದೇಶಕರ ಸಮಕ್ಷಮದಲ್ಲಿ ಬಹಿರಂಗ ಹರಾಜು ಮಾಡಲಾಗುವುದು.
ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ ಕುರಿತು ತರಬೇತಿ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕು. ಕ ಇಲಾಖೆ, ಶಿಕ್ಷಣ ಇಲಾಖೆ, ನಗರಾಭಿವೃದ್ದಿ ಕೋಶ, ಆಹಾರ ಸುರಕ್ಷತಾ ಗುಣಮಟ್ಟ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಹಯೋಗದೊಂದಿಗೆ ನಗರದ ಜಿಲ್ಲಾ ತರಬೇತಿ ಕೇಂದ್ರ, ಜಿಲ್ಲಾ ಆಸ್ಪತ್ರೆಯಲ್ಲಿ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ-2003ರ ಕುರಿತು ತರಬೇತಿಯನ್ನು ಆಯೋಜಿಸಲಾಗಿತ್ತು.
ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ತಾಲ್ಲೂಕು ತಂಬಾಕು ನಿಯಂತ್ರಣ ತನಿಖಾ ತಂಡದವರಾದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆಹಾರ ಸುರಕ್ಷತಾ ಅಧಿಕಾರಿಗಳು, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿಗಳು, ಆರೋಗ್ಯ ನಿರೀಕ್ಷಕರುಗಳಿಗೆ ತರಬೇತಿಯನ್ನು ಪಡೆದರು.
ತರಬೇತಿ ಕಾರ್ಯಗಾರದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ಜಿ.ಡಿ ರಾಘವನ್, ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ರಾಜೇಶ್ವರಿ ಅಣ್ಣಿಗೇರಿ, ವಿಭಾಗದ ಮುಖ್ಯಸ್ಥರು, ದಂತ ವಿಜ್ಞಾನ ಮಹಾವಿದ್ಯಾಲಯ, ದಾವಣಗೆರೆ, ಮಹಾಂತೇಶ್ ಉಳ್ಳಾಗಡ್ಡಿ, ವಿಭಾಗೀಯ ಸಂಯೋಜಕ, ರಾಜ್ಯ ತಂಬಾಕು ನಿಯಂತ್ರಣ ಘಟಕ, ಡಾ.ಸ್ವಾಮಿ, ಜಿಲ್ಲಾ ಸಲಹೆಗಾರ ಸತೀಶ್ ಕಲಹಾಳ್, ಸಮಾಜ ಕಾರ್ಯಕರ್ತ ದೇವರಾಜ್ ಕೆ.ಪಿ ಹಾಜರಿದ್ದರು.