ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜನವರಿ 5,6ಕ್ಕೆ ಯುವಜನೋತ್ಸವಕ್ಕೆ ಹೋಗಬೇಕಾ: ಕೆಎಸ್ ಆರ್ ಟಿಸಿಯಿಂದ ಕಾರ್ಯಕ್ರಮ ಸ್ಥಳಕ್ಕೆ ಬಸ್ ಸೌಲಭ್ಯ ಇದೆ ನೋಡಿ!

On: January 3, 2025 10:02 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:03-01-2025

ದಾವಣಗೆರೆ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ಜನವರಿ 5 ಮತ್ತು 6 ರಂದು ರಾಜ್ಯ ಮಟ್ಟದ ಯುವಜನೋತ್ಸವವನ್ನು ಏರ್ಪಡಿಸಲಾಗಿದೆ.

ಮುಖ್ಯಮಂತ್ರಿಗಳು ಜನವರಿ 5 ರಂದು ಬೆಳಗ್ಗೆ 11 ಗಂಟೆಗೆ ಎಂಬಿಎ ಮೈದಾನದಲ್ಲಿನ ಪ್ರಧಾನ ವೇದಿಕೆಯಲ್ಲಿ ಕಾರ್ಯಕ್ರಮ ಉದ್ಘಾಟಿಸುವರು. ಯುವಜನೋತ್ಸವ ಕಾರ್ಯಕ್ರಮದ ಅಂಗವಾಗಿ ಜ.5 ರ ಸಂಜೆ 8 ಗಂಟೆಯಿಂದ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಮತ್ತು ತಂಡದವರಿಂದ ಎಂಬಿಎ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಎರಡು ದಿನಗಳ ಕಾಲ ವಿವಿಧ ವೇದಿಕೆಗಳಲ್ಲಿ ಯುವಜನೋತ್ಸವ ಸ್ಪರ್ಧೆಗಳು ನಡೆಯುವುದರಿಂದ ಸಾರ್ವಜನಿಕರು ಕಾರ್ಯಕ್ರಮಗಳನ್ನು ವೀಕ್ಷಣೆ ಮಾಡಲು ಅನುಕೂಲವಾಗಲೆಂದು ಕೆ.ಎಸ್.ಆರ್.ಟಿ.ಸಿ.ಯಿಂದ ಕಾರ್ಯಕ್ರಮ ನಡೆಯುವ ಎಲ್ಲಾ ಸ್ಥಳಗಳಿಗೆ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣದ ಮುಂಭಾಗದಿಂದ ಎವಿಕೆ ಕಾಲೇಜು ರಸ್ತೆ, ಗುಂಡಿ ವೃತ್ತ, ಲಕ್ಷ್ಮೀ ಪ್ಲೋರ್‍ಮಿಲ್, ಬಾಪೂಜಿ ಎಂಬಿಎ ಕಾಲೇಜು, ಡಾ. ಶಾಮನೂರು ಶಿವಶಂಕರಪ್ಪ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಬಿಐಇಟಿ ಕಾಲೇಜ್, ಲಲಿತಕಲಾ ಮಹಾವಿದ್ಯಾಲಯ, ಜೆಜೆಎಂ ಕಾಲೇಜು ಮೂಲಕ ರೈಲ್ವೆ ಸ್ಟೇಷನ್, ಬಸ್ ನಿಲ್ದಾಣ, ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣಕ್ಕೆ ಬಸ್‍ಗಳು ನಿರಂತರವಾಗಿ ಸಂಚರಿಸಲಿವೆ ಎಂದು ಕೆಎಸ್‍ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment