SUDDIKSHANA KANNADA NEWS/DAVANAGERE/DATE:24_10_2025
ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಹೈದರಾಬಾದ್-ಬೆಂಗಳೂರು ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 20 ಜನರು ಮೃತಪಟ್ಟಿದ್ದಾರೆ.
READ ALSO THIS STORY: ಮುಜುಗರ ತರುವ ಹೇಳಿಕೆಗೆ ಹೈಕಮಾಂಡ್ ಬ್ರೇಕ್ ಹಾಕಲೇಬೇಕು: ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬುಸುಗುಟ್ಟಿದ ಬಸವರಾಜ್ ಶಿವಗಂಗಾ!
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನೇಕೂರ್ ಬಳಿ ಶುಕ್ರವಾರ ಬೆಳಗಿನ ಜಾವ ಖಾಸಗಿ ಪ್ರಯಾಣಿಕ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಬಳಿಕ ಬಸ್ ಸಂಪೂರ್ಣ ಭಸ್ಮವಾಗಿದೆ.
ಪ್ರಾಥಮಿಕ ವರದಿಗಳ ಪ್ರಕಾರ ಬಸ್ಸಿನಲ್ಲಿ ಸುಮಾರು 40 ಪ್ರಯಾಣಿಕರಿದ್ದರು. ಈ ಪೈಕಿ 18 ಪ್ರಯಾಣಿಕರು ಬದುಕುಳಿದಿದ್ದಾರೆ. ಹಲವರು ಸಜೀವ ದಹನವಾಗಿದ್ದು, ಗುರುತು ಪತ್ತೆ ಕಷ್ಟವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಧಿಕೃತ ಮೂಲಗಳ ಪ್ರಕಾರ, ಬೆಳಗಿನ ಜಾವ 3:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಬಸ್ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಭಾರೀ ಬೆಂಕಿ ಹೊತ್ತಿಕೊಂಡಿದ್ದು, ಇಡೀ ವಾಹನವೇ ಸುಟ್ಟು ಭಸ್ಮವಾಗಿದೆ.
ಪ್ರತ್ಯಕ್ಷದರ್ಶಿಗಳು ಹೇಳುವಂತೆ ಮೊದಲು ಬಸ್ಸಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ವೇಗವಾಗಿ ಹರಡಿತು. ಬೆಂಕಿಯ ತೀವ್ರತೆ ಹೆಚ್ಚುತ್ತಿದ್ದಂತೆ, 12 ಪ್ರಯಾಣಿಕರು ತುರ್ತು ನಿರ್ಗಮನ ದ್ವಾರವನ್ನು ಮುರಿದು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ಗೆ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಪೆಟ್ರೋಲ್ ಟ್ಯಾಂಕ್ ನಿಂದ ಪೆಟ್ರೋಲ್ ಸೋರಿಕೆಯಾಗಿದ್ದು, ಆಗ ಬೆಂಕಿ ಹತ್ತಿಕೊಂಡಿದೆ. ಬಸ್ ತಗುಲಿದ ಬೆಂಕಿ ಸುಮಾರು 15 ನಿಮಿಷಗಳಲ್ಲಿ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಬಸ್ ಚಾಲಕ ಡೋರ್ ತೆಗೆದಿದ್ದರೆ ಸಾವು ನೋವು ಕಡಿಮೆಯಾಗುತಿತ್ತು. ಆದ್ರೆ, ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ತಿಳಿದು ಬಂದಿದೆ.
ಅಪಘಾತ ಸಂಭವಿಸಿದಾಗ ಆ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದ ವರದಿಯಾಗಿದ್ದು, ಅದು ಡಿಕ್ಕಿಗೆ ಕಾರಣವಾಗಿರಬಹುದು. ಬಸ್ ಬೆಂಕಿಯಲ್ಲಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬೆಂಕಿಗೆ ಕಾರಣವನ್ನು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಪ್ರಧಾನಿ, ಮುರ್ಮು, ಆಂಧ್ರ ಸಿಎಂ ಘಟನೆ ಸಂತಾಪ:
ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ, “ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ ಎಂದು ತೀವ್ರ ದುಃಖಿತನಾಗಿದ್ದೇನೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.
ಪ್ರಧಾನಮಂತ್ರಿಯವರು ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದರು.
ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ಸಂತಾಪವನ್ನು ವ್ಯಕ್ತಪಡಿಸುತ್ತಾ, “ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ಬಸ್ ಬೆಂಕಿ ಅಪಘಾತದಲ್ಲಿ ಜೀವಹಾನಿ ತೀವ್ರ ದುರದೃಷ್ಟಕರ. ಮೃತರ ಕುಟುಂಬ ಸದಸ್ಯರಿಗೆ ನನ್ನ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದರು.
ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, “ಕರ್ನೂಲ್ ಜಿಲ್ಲೆಯ ಚಿನ್ನಾ ಟೇಕೂರ್ ಗ್ರಾಮದ ಬಳಿ ಸಂಭವಿಸಿದ ಭೀಕರ ಬಸ್ ಬೆಂಕಿ ಅಪಘಾತದ ಬಗ್ಗೆ ತಿಳಿದು ನನಗೆ ಆಘಾತವಾಗಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಗಾಯಗೊಂಡವರು ಮತ್ತು ಪೀಡಿತ ಕುಟುಂಬಗಳಿಗೆ ಸರ್ಕಾರಿ ಅಧಿಕಾರಿಗಳು ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತಾರೆ” ಎಂದು ಹೇಳಿದರು.
ಆರೋಗ್ಯ ಸಚಿವ ಸತ್ಯಕುಮಾರ್ ಯಾದವ್ ಅವರು ದುರಂತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದರು ಮತ್ತು ಬಲಿಪಶುಗಳನ್ನು ಗುರುತಿಸಲು ಡಿಎನ್ಎ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದರು. “ಕರ್ನೂಲ್ ಜಿಲ್ಲೆಯ ಕಲ್ಲೂರು ಮಂಡಲದ ಚಿನ್ನಟೇಕೂರಿನಲ್ಲಿ ಸಂಭವಿಸಿದ ಖಾಸಗಿ ಬಸ್ ಅಪಘಾತದಿಂದ ತೀವ್ರ ಆಘಾತವಾಗಿದೆ” ಎಂದು ಸಚಿವರು ಹೇಳಿದರು, ಗಾಯಾಳುಗಳಿಗೆ ಸಾಧ್ಯವಾದಷ್ಟು ಉತ್ತಮ ವೈದ್ಯಕೀಯ ಆರೈಕೆಯನ್ನು ಒದಗಿಸುವಂತೆ ಕರ್ನೂಲ್ ಜಿಜಿಎಚ್ ಸೂಪರಿಂಟೆಂಡೆಂಟ್‌ಗೆ ಸೂಚಿಸಲಾಗಿದೆ ಎಂದು ಹೇಳಿದರು.







