Home ದಾವಣಗೆರೆ ಬಸವಣ್ಣರ ಕುರಿತು ಅವಹೇಳನಕಾರಿ ಕೃತಿ ರಚನೆ ವಿವಾದ, ರಾಜ್ಯ ಸರ್ಕಾರ ಕೂಡಲೇ ಸ್ಪಷ್ಟನೆ ನೀಡಿ, ಪುಸ್ತಕ ಮುಟ್ಟುಗೋಲು ಹಾಕಿಕೊಳ್ಳಲಿ: ಬಿ. ವೈ. ವಿಜಯೇಂದ್ರ ಆಗ್ರಹ
ದಾವಣಗೆರೆನವದೆಹಲಿಬೆಂಗಳೂರು

ಬಸವಣ್ಣರ ಕುರಿತು ಅವಹೇಳನಕಾರಿ ಕೃತಿ ರಚನೆ ವಿವಾದ, ರಾಜ್ಯ ಸರ್ಕಾರ ಕೂಡಲೇ ಸ್ಪಷ್ಟನೆ ನೀಡಿ, ಪುಸ್ತಕ ಮುಟ್ಟುಗೋಲು ಹಾಕಿಕೊಳ್ಳಲಿ: ಬಿ. ವೈ. ವಿಜಯೇಂದ್ರ ಆಗ್ರಹ

Share
ಬಸವಣ್ಣ
Share

ಬೆಂಗಳೂರು: ಲಿಂಗಭೇದ, ವರ್ಣಭೇದ ಹಾಗೂ ವರ್ಗಭೇದ ರಹಿತವಾದ ಸಮಾನತೆಯ ಸಮಾಜ ನಿರ್ಮಾಣದ ಬೋಧನೆ ಮಾಡಿದ ಜಗಜ್ಯೋತಿ ಬಸವಣ್ಣನವರು ವೀರಶೈವ ಲಿಂಗಾಯತ ಸಮುದಾಯದ ಅಸ್ಮಿತೆಯಾಗಿದ್ದು, ವಿಶ್ವ ಕಂಡ ಶ್ರೇಷ್ಠ ದಾರ್ಶನಿಕರ ಗೌರವಕ್ಕೆ ಧಕ್ಕೆ ತರುವ ಯಾವುದೇ ಕೃತಿ ಅಥವಾ ಹೇಳಿಕೆಗಳನ್ನು ಸಮುದಾಯವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೇಖಕ ರವಿ ಹಂಜ್ ಅವರ ವಿವಾದಾತ್ಮಕ ‘ಬಸವ ಮಂಟಪ’ ಕೃತಿಯಲ್ಲಿ ಬಸವಣ್ಣನವರ ಚಿಂತನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ವಿಷಯಗಳನ್ನು ಮಂಡಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ರಾಜ್ಯ ಸರ್ಕಾರ ಈ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ವಿವಾದಾತ್ಮಕ ಕೃತಿ ಮುಟ್ಟುಗೋಲಿಗೆ ಆಗ್ರಹ: ಬಸವಣ್ಣನವರ ಸಾರ್ವಕಾಲಿಕ ಚಿಂತನೆಗಳು ಮುಂದಿನ ಜನಾಂಗಕ್ಕೆ ದಾರಿದೀಪವಾಗಿವೆ. ಕೃತಿಕಾರ ರವಿ ಹಂಜ್ ಅವರ ವಿವಾದಾತ್ಮಕ ಕೃತಿಯಲ್ಲಿ ಬಸವಣ್ಣನವರ ಗೌರವಕ್ಕೆ ಚ್ಯುತಿ ತಂದಿರುವ ಅಂಶಗಳನ್ನು ಪರಿಶೀಲಿಸಿ, ರಾಜ್ಯ ಸರ್ಕಾರ ತಕ್ಷಣವೇ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು.

ಸರ್ಕಾರದ ನಿಲುವು ಸ್ಪಷ್ಟಪಡಿಸಲು ಒತ್ತಾಯ: ರಾಜ್ಯ ಸರ್ಕಾರವು ಬಸವಣ್ಣನವರನ್ನು ಕೇವಲ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದರೆ ಸಾಲದು, ಅವರ ಚಿಂತನೆ ಮತ್ತು ಸಿದ್ಧಾಂತಗಳಿಗೆ ಪೂರಕವಾಗಿ ನಡೆದುಕೊಳ್ಳಬೇಕು. ಈ ವಿಷಯದಲ್ಲಿ ಸರ್ಕಾರ ತನ್ನ ನಿಲುವನ್ನು ಕೂಡಲೇ ಪ್ರಕಟಿಸಬೇಕು.

ಸಮುದಾಯದ ಅಸ್ಮಿತೆಗೆ ಧಕ್ಕೆ ಸಹಿಸುವುದಿಲ್ಲ: ಬಸವಣ್ಣನವರ ಬದುಕಿನ ಸಂದೇಶಗಳು ಕಾಲಾತೀತವಾಗಿದ್ದು, ಅವರ ವ್ಯಕ್ತಿತ್ವ ಹಾಗೂ ತತ್ತ್ವಗಳಿಗೆ ಧಕ್ಕೆ ತರುವ ಯ ಪ್ರಯತ್ನಗಳನ್ನು ವೀರಶೈವ ಲಿಂಗಾಯತ ಸಮುದಾಯ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

ವಿಶ್ವಕ್ಕೆ ಶಾಂತಿ ಮತ್ತು ಸಮಾನತೆಯ ಸಂದೇಶ ಸಾರಿದ ವಿಶ್ವಗುರು ಬಸವಣ್ಣನವರ ಗೌರವವನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Share

Recent Posts

Recent Comments

No comments to show.
Related Articles