ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

BIG BREAKING: ಚನ್ನಪಟ್ಟಣ, ಶಿಗ್ಗಾಂವ, ಸಂಡೂರು ಉಪಚುನಾವಣೆಗೆ ಡೇಟ್ ಫಿಕ್ಸ್: ನವೆಂಬರ್ 13ಕ್ಕೆ ವೋಟಿಂಗ್, 23ಕ್ಕೆ ಕೌಂಟಿಂಗ್..!

On: October 15, 2024 4:09 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:15-10-2024

ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವ, ಸಂಡೂರು ಉಪಚುನಾವಣೆಗೆ ದಿನಾಂಕ ಘೋಷಿಸಲಾಗಿದೆ. ಈ ಮೂರು ಕ್ಷೇತ್ರಗಳಿಗೆ ನವೆಂಬರ್ 13ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ.

ಅಕ್ಟೋಬರ್ 25 ನಾಮಪತ್ರ ಸಲ್ಲಿಕೆ ಸಲ್ಲಿಸಲು ಕೊನೆ ದಿನ. ಅಕ್ಟೋಬರ್ 30 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ.

ಈ ಮೂರು ಕ್ಷೇತ್ರಗಳೂ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿದೆ. ಚನ್ನಪಟ್ಟಣದಲ್ಲಿ ಹೆಚ್. ಡಿ. ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿತ್ತು. ಈ ಕ್ಷೇತ್ರದಲ್ಲಿ ಸಿ. ಪಿ. ಯೋಗೀಶ್ವರ್ ಬಿಜೆಪಿ – ಜೆಡಿಎಸ್ ಮೈತ್ರಿಯ ಅಭ್ಯರ್ಥಿಯಾಗಲು ಆಸಕ್ತಿ ತೋರಿದ್ದಾರೆ. ಮಾತ್ರವಲ್ಲ, ಟಿಕೆಟ್ ಸಿಗದಿದ್ದರೆ ಬೇರೆ ಪಕ್ಷದಿಂದ ಕಣಕ್ಕಿಳಿಯಬೇಕೋ ಅಥವಾ ಪಕ್ಷೇತರನಾಗಿ ಕಣಕ್ಕಿಳಿಯಬೇಕೋ ಎಂಬ ಗೊಂದಲದಲ್ಲಿ ಸಿ. ಪಿ. ಯೋಗೀಶ್ವರ್ ಇದ್ದಾರೆ. ಮೈತ್ರಿಕೂಟ ಅಭ್ಯರ್ಥಿ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಇವೆ.

ಬಸವರಾಜ್ ಬೊಮ್ಮಾಯಿ ಸಂಸದರಾದ ಕಾರಣ ಶಿಗ್ಗಾಂವ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಮೂರು ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment