ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ನ್ಯಾ. ನಾಗಮೋಹನ್ ದಾಸ್ ಆಯೋಗದ ಒಳಮೀಸಲಾತಿ ಕುರಿತ ಮಧ್ಯಂತರ ವರದಿ ಅಂಗೀಕರಿಸಿದ ಸಚಿವ ಸಂಪುಟ

On: March 27, 2025 7:20 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:27-03-2025

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿಗಳಾದ ಗೌರವಾನ್ವಿತ ಶ್ರೀ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿರುವುದಾಗಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು.

ಅವರು ಇಂದು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಕುರಿತು ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಸಚಿವರ ಹೆಚ್.ಸಿ. ಮಹಾದೇವಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಶರಣ ಪ್ರಕಾಶ ಪಾಟೀಲ್ ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ನಾಲ್ಕು ಪ್ರಮುಖ ಶಿಫಾರಸ್ಸುಗಳನ್ನು ಮಾಡಿದೆ. ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕು. ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿವಸಗಳೊಳಗೆ ಹೊಸ ಸಮೀಕ್ಷೆಯನ್ನು ನಡೆಸಬಹುದೆಂದು ತಜ್ಞರು ಅಭಿಪ್ರಾಯ ಪಡುತ್ತಾರೆ. ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿಯನ್ನು ಸಿದ್ದಪಡಿಸಬೇಕು. ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು . ಸಮೀಕ್ಷೆಗೆ ಅಗತ್ಯವಿರುವ ತರಬೇತಿ, ಸಂಪನ್ಮೂಲ ಕ್ರೋಢೀಕರಣಗಳ ಉಸ್ತುವಾರಿಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದು ಸೂಕ್ತವೆಂದು ಆಯೋಗವು ಅಭಿಪ್ರಾಯಪಟ್ಟಿದೆ. ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ಈ ವರದಿಯಲ್ಲಿ ತಿಳಿಯಪಡಿಸಿರುವ ಮಾನದಂಡಗಳಂತೆ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವರ್ಗೀಕರಣಗೊಳಿಸಿ ಲಭ್ಯವಿರುವ ಮೀಸಲಾತಿ ಪ್ರಮಾಣವನ್ನು ಆದ್ಯತೆ ಮೇಲೆ ಹಂಚಿಕೆ ಮಾಡಬೇಕು ಎಂದು ಸಮಿತಿ ಶಿಫಾರಸ್ಸು ಮಾಡಿರುವ ಬಗ್ಗೆ ಸಚಿವರು ವಿವರಿಸಿದರು.

ನಾಗಮೋಹನ್ ದಾಸ್ ಆಯೋಗದವರ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಇಂದು ಅಂಗೀಕರಿಸಿದೆ. ಒಳಮೀಸಲಾತಿ ವರ್ಗೀಕರಣವನ್ನು ಶೀಘ್ರಗತಿಯಲ್ಲಿ ಕೈಗೊಳ್ಳುವ ಸಂಬಂಧ, ಹೊಸ ಸಮೀಕ್ಷೆ ನಡೆಸುವ ಕಾರ್ಯವನ್ನು ನಾಗಮೋಹನ್ ದಾಸ್ ಸಮಿತಿಗೆ ವಹಿಸಲು ಸಚಿವ ಸಂಪುಟ ನಿರ್ಣಯಿಸಿದೆ. ಸಮೀಕ್ಷಾ ಕಾರ್ಯವನ್ನು 60 ದಿನದೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಅನುಕೂಲವಾಗುವಂತೆ ಸಮಿತಿಯ ಅವಧಿಯನ್ನು ಎರಡು ತಿಂಗಳವೆರೆಗೆ ವಿಸ್ತರಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಸಮಿತಿಯ ಶಿಫಾರಸ್ಸುಗಳಲ್ಲಿ ಹೊಸ ವಿಷಯಗಳೇನಿದೆ ಹಾಗೂ ಎರಡು ತಿಂಗಳ ಕಾಲಾವಧಿಯಲ್ಲಿ ಸಮೀಕ್ಷೆ ಕೈಗೊಳ್ಳಲು ಸಾಧ್ಯವೇ ಎಂಬ ಪತ್ರಕರ್ತರ ಪ್ರಶ್ನೆ ಪ್ರತಿಕ್ರಿಯೆ ನೀಡಿದ ಸಚಿವರು, ರಾಜ್ಯದಲ್ಲಿ ಆರು ಸಾವಿರ ಪಂಚಾಯತಿ ಹಾಗೂ 300 ಕ್ಕೂ ಹೆಚ್ಚು ವಾರ್ಡ್ಗಗಳಿವೆ. ಈ ಕಾರ್ಯವನ್ನು ಸರ್ಕಾರದ ಮುಖ್ಯಕಾರ್ಯದರ್ಶಿಗಳ ಉಸ್ತುವಾರಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ತೀವ್ರಗತಿಯಲ್ಲಿ ಕೈಗೊಳ್ಳಲು ಸಚಿವಸಂಪುಟ ಸೂಚನೆ ನೀಡಿದೆ. ಆಯೋಗವು ಸಮೀಕ್ಷೆ ಕೈಗೊಳ್ಳಲು ಬೇಕಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಕಾರ್ಯದರ್ಶಿಗಳ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರವು ಮೀಸಲಾತಿ ಸೌಲಭ್ಯ ನೀಡಲು ಬದ್ಧವಾಗಿದ್ದು, ಭವಿಷ್ಯದಲ್ಲಿ ಯಾವುದೇ ಗೊಂದಲಗಳಾಗದಂತೆ ದತ್ತಾಂಶಗಳು ಕರಾರುವಕ್ಕಾಗಿ ಪಡೆಯಲು ಹಾಗೂ ಹಾಗೂ ಜನರಿಗೆ ಮೀಸಲಾತಿಯ ಅನುಕೂಲ ಕಲ್ಪಿಸುವ ಉದ್ದೇಶವನ್ನು ಸರ್ಕಾರ ಹೊಂದಿರುವುದಾಗಿ ಸಚಿವರು ತಿಳಿಸಿದರು.

ಈ ಹಿಂದೆ ನಡೆಸಲಾಗಿರುವ ಜನಗಣತಿಯಲ್ಲಿ ಆದಿ ಕರ್ನಾಟಕ, ಆದಿ ದ್ರಾವಿಡ , ಆದಿ ಆಂಧ್ರ,ಎಸ್ ಸಿ ವರ್ಗಗಳ ಮಾಹಿತಿಗಳು ವರದಿಯಲ್ಲಿ ಇರುವುದಿಲ್ಲ. ಈ ದತ್ತಾಂಶಗಳಿಲ್ಲದೇ ಹೋದರೆ ಕಾನೂನಿನಡಿ ಮಾನ್ಯವಾಗಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಎರಡು ತಿಂಗಳ ಕಾಲಾವಧಿಯಲ್ಲಿ ಹೊಸ ಸಮೀಕ್ಷೆ ಮಾಡಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹಾದೇವಪ್ಪ ವಿವರಿಸಿದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಅಂತರಾಷ್ಟ್ರ

ನ. 26ರಿಂದ ಐದು ದಿನಗಳ ಶಾಮನೂರು ಡೈಮಂಡ್, ಶಿವಗಂಗಾ ಕಪ್ 2025: ಅಂತರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ಆಯೋಜನೆ

ಅಪಘಾತದಲ್ಲಿ ಮೃತಪಟ್ಟ ಶಿಕ್ಷಕನ ಕುಟುಂಬಕ್ಕೆ ಸಿಕ್ತು 1 ಕೋಟಿ ಪರಿಹಾರ! ಸಿಕ್ಕಿದ್ದು ಹೇಗೆ ಗೊತ್ತಾ?

ಭದ್ರತೆ

ಭದ್ರತೆ ಸವಾಲು ನಿಭಾಯಿಸದ, ದೇಶದ ಭದ್ರತಾ ವ್ಯವಸ್ಥೆ ವೈಫಲ್ಯ ಹೊಣೆ ಹೊತ್ತು ಅಮಿತ್ ಶಾ ರಾಜೀನಾಮೆ ನೀಡಲಿ: ಬಿ. ಕೆ. ಹರಿಪ್ರಸಾದ್ ಆಗ್ರಹ

ಧರ್ಮೇಂದ್ರ

ಧರ್ಮೇಂದ್ರ ಚಿಕಿತ್ಸೆಗೆ ಸ್ಪಂದಿಸುತ್ತಾ ಚೇತರಿಕೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಹೇಮಾ ಮಾಲಿನಿ, ಇಶಾ ಡಿಯೋಲ್ ಕೆಂಡಾಮಂಡಲ!

ಪ್ರಭಾ ಮಲ್ಲಿಕಾರ್ಜುನ್

ಅಡಿಕೆ ಕ್ಯಾನ್ಸರ್ ಕಾರಕವಲ್ಲ, ಹೆಚ್ಚಿನ ಸಂಶೋಧನೆಗೆ ಅನುದಾನ ಕೊಡುವಂತೆ ಕೇಂದ್ರ ಕೃಷಿ ಸಚಿವರಿಗೆ ಮನವಿ: ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ

ಕೆಂಪು ಕೋಟೆ ಪ್ರಬಲ ಸ್ಫೋಟ ಹಿನ್ನೆಲೆ: ದಾವಣಗೆರೆ ಜಿಲ್ಲೆಯಲ್ಲಿ ಹೇಗಿದೆ ಕಟ್ಟೆಚ್ಚರ?

Leave a Comment