ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

On: October 28, 2025 6:09 PM
Follow Us:
ಅರ್ಜಿ
---Advertisement---

SUDDIKSHANA KANNADA NEWS/DAVANAGERE/DATE:28_10_2025

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಬಹುದಾಗಿದೆ.

READ ALSO THIS STORY: 70 ವರ್ಷದ ಹಿಂದಿನ ಪೊಲೀಸ್ ಕ್ಯಾಪ್ ಬದಲು, ಪೀಕ್ ಕ್ಯಾಪ್ ಮಾದರಿ ಆಯ್ಕೆ ಮಾಡಿದ್ದೇ ಸಿಎಂ ಸಿದ್ದರಾಮಯ್ಯರಂತೆ!

ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಾಜ್ಯದ ವಿವಿಧ ಮಾಧ್ಯಮ ಸಂಸ್ಥೆಗಳು ಈ ಕೆಳಕಂಡಂತೆ ದತ್ತಿನಿದಿ ಪ್ರಶಸ್ತಿಗಳನ್ನು ಸ್ಥಾಪಿಸಿವೆ: ಬೆಂಗಳೂರಿನ ‘ಅಭಿಮಾನಿ ಪ್ರಕಾಶನ’ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ‘ಸಾಮಾಜಿಕ ಸಮಸ್ಯೆ’ ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಅಭಿಮಾನಿ ಪ್ರಶಸ್ತಿ”, ಮೈಸೂರಿನ “ಮೈಸೂರು ದಿಗಂತ” ಪತ್ರಿಕಾ ಸಂಸ್ಥೆಯು “‘ಮಾನವೀಯ ಸಮಸ್ಯೆ’ ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ”, ಬೆಂಗಳೂರಿನ ಅಭಿಮನ್ಯು ಪತ್ರಿಕೆ ಸಂಸ್ಥೆಯು ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ಅಂಕಣ/ಸಂಪಾದಕೀಯ/ಪರಿಣಾಮಕಾರಿ ವರದಿಗೆ “ಅಭಿಮನ್ಯು ಪ್ರಶಸ್ತಿ”, ಬೆಂಗಳೂರಿನ “ಪ್ರಜಾ ಸಂದೇಶ ಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ
ಲೇಖನಕ್ಕೆ : ಪ್ರಜಾ ಸಂದೇಶ ದತ್ತಿ ಪ್ರಶಸ್ತಿ”ಗಳನ್ನು ಸ್ಥಾಪಿಸಿವೆ. ಈ ದತ್ತಿ ಪ್ರಶಸ್ತಿಗಳು ತಲಾ ಹತ್ತು ಸಾವಿರ ರೂ ನಗದು ಬಹುಮಾನ ಒಳಗೊಂಡಿವೆ.

ಈ ಪ್ರಶಸ್ತಿಗಳಿಗೆ ಆಸಕ್ತ ಪತ್ರಕರ್ತರು 01-01-2025 ರಿಂದ 25-10-2025ರ ವರೆಗೆ ಪ್ರಕಟವಾಗಿರುವ ತಮ್ಮ ಒಂದು ಲೇಖನ-ವರದಿಯನ್ನು ಕಳುಹಿಸಬಹುದು.

ಕನ್ನಡ ದೈನಿಕ-ಟಿವಿ-ವಾಹಿನಿ, ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಹೆಸರು (ಬೈಲೈನ್) ಬರೆದಿರುವ ವರದಿ ಲೇಖನಿಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶ. ಲೇಖನ-ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬAಧಿಸಿದ ಪತ್ರಿಕೆಯ ಸಂಪಾದಕರಿAದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು.

ಲೇಖನ ವರದಿಗಳ ಲಕೋಟೆಯಲ್ಲಿ ಯಾವ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುತ್ತಿರುವುದು ಎಂಬುದನ್ನು ‘ಅಭಿಮಾನಿ ಪ್ರಶಸ್ತಿ- 2025’ , ‘ಮೈಸೂರು ದಿಗಂತ ಪ್ರಶಸ್ತಿ-2025’, “ಅಭಿಮನ್ಯು ಪ್ರಶಸ್ತಿ-2025” ಹಾಗೂ “ಪ್ರಜಾ ಸಂದೇಶ ದತ್ತಿ ಪ್ರಶಸ್ತಿ-2025” ಎಂದು ಸ್ಪಷ್ಟವಾಗಿ ಬರೆದು ಲೇಖನಗಳನ್ನು ಇದೇ 12-11-2025 ರ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ ಡಾ.ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು-560001. ಇವರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು ಎಂದು ಅಕಾಡೆಮಿ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಲಿಂಗಾಯತ ಪಂಚಮಸಾಲಿ

ಒಗ್ಗಟ್ಟಿನ ಮಂತ್ರ ಜಪಿಸಿದ ಲಿಂಗಾಯತ ಪಂಚಮಸಾಲಿ ಪೀಠಗಳ ವಚನಾನಂದ ಶ್ರೀ ಮತ್ತು ಬಸವಜಯ ಮೃತ್ಯುಂಜಯ ಸ್ವಾಮೀಜಿ!

ಎಂ. ಪಿ. ರೇಣುಕಾಚಾರ್ಯ

ಸ್ವಯಂಘೋಷಿತ ಸಂವಿಧಾನ ತಜ್ಞನ ಮಾತಿಗೆ ಜೈ ಎಂದಿದ್ದಕ್ಕೆ ಸಿದ್ದರಾಮಯ್ಯರಿಗೆ ಹೈಕೋರ್ಟ್ ಕಪಾಳಮೋಕ್ಷ: ಎಂ. ಪಿ. ರೇಣುಕಾಚಾರ್ಯ ಲೇವಡಿ!

ರಾಶಿ

ಬುಧವಾರದ ರಾಶಿ ಭವಿಷ್ಯ 29 ಅಕ್ಟೋಬರ್ 2025: ಈ ರಾಶಿಯವರಿಗೆ ಉದ್ಯೋಗ ಖಾಯಂ ಆಗಲಿದೆ

ತಂತ್ರಜ್ಞಾನ

ಮುಂದುವರಿದ ತಂತ್ರಜ್ಞಾನ ಯುಗದಲ್ಲಿ ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ಜಿ. ಬಿ. ವಿನಯ್ ಕುಮಾರ್

ಮೆಣಸಿನಕಾಯಿ

ಮೆಣಸಿನಕಾಯಿಗೆ ಥ್ರಿಪ್ಸ್ ನುಸಿ, ಎಲೆ ಮುಟುರು, ಬೂದಿ, ಹಣ್ಣು ಕೊಳೆ ರೋಗ : ತೋಟಗಾರಿಕೆ ಇಲಾಖೆ ಕೊಟ್ಟಿದೆ ಟಿಪ್ಸ್!

ಆರ್ ಎಸ್ ಎಸ್

ಆರ್ ಎಸ್ ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು ಕೈ ಸರ್ಕಾರಕ್ಕೆ ಮುಖಭಂಗ: ಬಿ. ವೈ. ವಿಜಯೇಂದ್ರ ಆಕ್ರೋಶ!

Leave a Comment