Site icon Kannada News-suddikshana

ಹೋಂಸ್ಟೇ ನವೀಕರಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಅರ್ಜಿ

SUDDIKSHANA KANNADA NEWS/ DAVANAGERE/ DATE:24_07_2025

ದಾವಣಗೆರೆ: ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ವತಿಯಿಂದ ಧರ್ತಿಅಬಾ ಜನ್ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿ ಹೋಂಸ್ಟೇ ನವೀಕರಿಸಲು (ಹೊಸದಾಗಿ ನಿರ್ಮಿಸಲು ) ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

READ ALSO THIS STORY: ಕಡೂರಿನಲ್ಲಿ ಅಪಘಾತ: ದಾವಣಗೆರೆಯ ರಿಯಲ್ ಎಸ್ಟೇಟ್ ಉದ್ಯಮಿ ಪ್ರತಾಪ್ ಪವಾರ್ ದಾರುಣ ಸಾವು
ಬುಡಕಟ್ಟು ಸಮುದಾಯವಿರುವ ಗ್ರಾಮಗಳಲ್ಲಿ ಅತಿಥ್ಯ ಕ್ಷೇತ್ರದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬುಡಕಟ್ಟು ಸಮುದಾಯದ ಸಂಸ್ಕೃತಿ ಪರಪಂರೆ ಮತ್ತು ನೈಸರ್ಗಿಕ ಸಂಪತ್ತನ್ನು ಪ್ರವಾಸಿಗರಿಗೆ ಪರಿಚಯಿಸಿದ್ದು, ಬುಡಕಟ್ಟು ಜನಾಂಗದವರು ಡೆವಲಪ್‍ಮೆಂಟ್ ಆಫ್ ಹೋಂ ಸ್ಟೇ ಇನ್ ಟ್ಯಾರಿಬಲ್ ಏರಿಯ ಯೋಜನೆಯನ್ನು ಉಪಯೋಗಿಸಿಕೊಳ್ಳಲು ಆಸಕ್ತ ವ್ಯಕ್ತಿ ಕುಟುಂಬದವರು ಅರ್ಜಿ ನಮೂನೆಯನ್ನು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ

ಕಚೇರಿಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಜುಲೈ 31 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-230123, 9916557230 ನ್ನು ಸಂಪರ್ಕಿಸಲು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ದಿ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.

Exit mobile version