Site icon Kannada News-suddikshana

ವೃತ್ತಿಪರ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ: 200 ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ

SUDDIKSHANA KANNADA NEWS/ DAVANAGERE/ DATE:01-04-2025

ದಾವಣಗೆರೆ: ಪ್ರಸಕ್ತ ಸಾಲಿಗೆ ಐಐಎಸ್ಸಿ, ಐಐಟಿ ಮತ್ತು ನೀಟ್ ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಅಂಡ್ ಮಶಿನ್ ಲರ್ನಿಂಗ್ ವೃತ್ತಿಪರ ಕೋರ್ಸ್‍ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಮೊದಲನೇ ಮಹಡಿ, ಜಯವಿಭವನಿಲಯ, ರಾಂ & ಕೋ ಅಂಗಡಿ ಎದುರು, 4ನೇ ಮೇನ್, ಪಿ.ಜೆ ಬಡಾವಣೆ ದಾವಣಗೆರೆ ಇಲ್ಲಿ ಪಡೆದು ಏಪ್ರಿಲ್ 9 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಚನ್ನಗಿರಿ ತಾಲ್ಲೂಕು ಪ.ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಸಂಪರ್ಕಿಸಬೇಕೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

Exit mobile version