SUDDIKSHANA KANNADA NEWS/ DAVANAGERE/ DATE_12-07_2025
ದಾವಣಗೆರೆ: ದಾವಣಗೆರೆ ತಾಲೂಕಿನ ಹುಣಸೆಕಟ್ಟೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮಾರುತಿ ಸುಜುಕಿ ಎರ್ಟಿಗಾ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ನಾಲ್ವರು ಸಿನಿಮೀಯ ರೀತಿಯಲ್ಲಿ ಪಾರಾದ ಘಟನೆ ನಡೆದಿದೆ.
READ ALSO THIS STORY: ದಾವಣಗೆರೆಯಲ್ಲಿ “ಮನೆ ಮನೆಗೆ ಪೊಲೀಸ್” ಪ್ರೊಗ್ರಾಂಗೆ ಸೋಮವಾರ ಚಾಲನೆ: ಏನೆಲ್ಲಾ ಪ್ರಯೋಜನಗಳಿವೆ?
ಆಂಧ್ರಪ್ರದೇಶದಿಂದ ಗೋವಾ ಕಡೆ ತೆರಳುತ್ತಿದ್ದ ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಇನ್ನು ಕಾರಿನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಎಲ್ಲರೂ ಕೆಳಗಡೆ ಇಳಿದಿದ್ದಾರೆ. ನೋಡನೋಡುತ್ತಿದ್ದಂತೆ ಕಾರು ಧಗಧಗನೇ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲಾಗಿ ಹೋಗಿದೆ.
ಕಾರಿಗೆ ಬೆಂಕಿ ತಗುಲುತ್ತಿದ್ದಂತೆ ಅಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಬರುವಷ್ಟರಲ್ಲಿ ಬಹುತೇಕ ಕಾರು ಸುಟ್ಟು ಹೋಗಿತ್ತು. ಬೆಂಕಿ ನಂದಿಸುವ ಕಾರ್ಯ ಮಾಡಿದರಾದರೂ ಕಾರು ಸುಟ್ಟು ಕರಕಲಾಯಿತು. ನಾಲ್ವರು ಅದೃಷ್ಟವಶಾತ್ ಪಾರಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.