SUDDIKSHANA KANNADA NEWS/ DAVANAGERE/ DATE:03-03-2025
ದಾವಣಗೆರೆ: ದತ್ತು ಸ್ವೀಕಾರ ಕೇಂದ್ರದಲ್ಲಿ ತಾಯಿಗೆ ಬೇಡವಾದ ಶಿಶುವನ್ನು ತಾಯಿಗಿಂತಲೂ ಮಿಗಿಲಾದ ಆರೈಕೆ ಕೇಂದ್ರದಲ್ಲಿ ಮಾಡಲಾಗುತ್ತದೆ. ಸಾರ್ವಜನಿಕರು ಈ ಮಕ್ಕಳೊಂದಿಗೆ ಹುಟ್ಟು ಹಬ್ಬ, ಹೊಸ ವರ್ಷವನ್ನು ಆಚರಿಸಿಕೊಳ್ಳಿ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶೇಷ ದತ್ತು ಸಂಸ್ಥೆ ಅಮೂಲ್ಯ(ಜಿ) ಕೇಂದ್ರ ಘಟಕ-2, ಮತ್ತು ಫಿಜಿಯೋತೆರೆಪಿ ಕೇಂದ್ರವನ್ನು ಉದ್ಘಾಟಿಸಿ ಮಾತಾನಾಡಿದರು.
ಎಲ್ಲೊ ಬಿಟ್ಟು ಹೋದ ಕೂಸು, ಹೆತ್ತ ತಾಯಿಗೇ ಬೇಡವಾದ ಶಿಶುಗಳನ್ನು ಮಕ್ಕಳ ದತ್ತು ಸ್ವೀಕಾರ ಕೇಂದ್ರದಲ್ಲಿ ತಾಯಿಯ ಕರುಳ ಬಳ್ಳಿಯಂತೆ ನೋಡಿಕೊಳ್ಳಲಾಗುತ್ತದೆ. ಎರಡು ದಿನದ ನವಜಾತ ಶಿಶುವಿನಿಂದ ಎರಡು ತಿಂಗಳವರೆಗಿನ ಶಿಶುಗಳು ದತ್ತು ಕೇಂದ್ರಕ್ಕೆ ತಲುಪುತ್ತವೆ ಎಂದರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಅಧಿಕಾರಿ ಸುರೇಶ.ಬಿ.ಇಟ್ನಾಳ್, ಜಿಲ್ಲಾ ಸರ್ಜನ್ ಡಾ. ನಾಗೇಂದ್ರಪ್ಪ, ಡಿಹೆಚ್‌ಓ ಷಣ್ಮುಖಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಉಪಸ್ಥಿತರಿದ್ದರು.