SUDDIKSHANA KANNADA NEWS/ DAVANAGERE/ DATE:07-03-2025
ಬೆಂಗಳೂರು: ಮಾಧ್ಯಮ ಮಾನ್ಯತೆ ಹೊಂದಿರುವ ರಾಜ್ಯದ ಒಟ್ಟು 2,500 ಪತ್ರಕರ್ತರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ ʻಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿʼ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಪ್ರಸ್ತುತ ನೀಡುತ್ತಿರುವ 12,000 ರೂ. ಮಾಸಾಶನವನ್ನು 15,000 ರೂ.ಗಳಿಗೆ ಹಾಗೂ ಕುಟುಂಬ ಮಾಸಾಶನವನ್ನು 6,000 ರೂ.ಗಳಿಂದ 7,500 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಚಲನಚಿತ್ರ ಅಕಾಡೆಮಿಯು ಹೊಂದಿರುವ 2.5 ಎಕರೆ ನಿವೇಶನದಲ್ಲಿ ಬಹುಪರದೆಗಳಿರುವ ಚಿತ್ರಮಂದಿರ ಸಮುಚ್ಛಯವನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು. ಸಾಮಾಜಿಕ, ಚಾರಿತ್ರಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬಿಂಬಿಸುವ ಕನ್ನಡ ಚಲನಚಿತ್ರಗಳನ್ನು ಡಿಜಿಟಲ್ ಹಾಗೂ ನಾನ್-ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸಲು 3 ಕೋಟಿ ರೂ. ವೆಚ್ಚದಲ್ಲಿ ಚಲನಚಿತ್ರ ಭಂಡಾರವನ್ನು ಸ್ಥಾಪಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.