ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

10 ವರ್ಷ ಹಳೆಯದಾದ ಕಾರಣ ಜಾತಿ ಗಣತಿ ಮರುಗಣತಿ: ಸಿಎಂ ಸಿದ್ದರಾಮಯ್ಯ!

On: June 11, 2025 1:13 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-11-06-2025

ಚಿಕ್ಕಬಳ್ಳಾಪುರ: ಜಾತಿ ಗಣತಿ ಬಗ್ಗೆ ಕೆಲವು ದೂರುಗಳು ಬಂದಿವೆ. ಸಮೀಕ್ಷೆ ನಡೆದು 10 ವರ್ಷಗಳಾಗಿದ್ದು, ಹಳೆಯದಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಕಡಿಮೆ ಅವಧಿಯಲ್ಲಿ ಮರುಗಣತಿ ಕೈಗೊಳ್ಳಲು ಸೂಚಿಸಿದ್ದಾರೆ. ವರದಿಯನ್ನು ನಾವು ತಿರಸ್ಕರಿಸುವುದಿಲ್ಲ. ತಾತ್ವಿಕವಾಗಿ ವರದಿಯನ್ನು ಒಪ್ಪಿಕೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಗೌರಿಬಿದನೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಎಂದು ನಾಮಕರಣ ಮಾಡಲು ಗೃಹ ಸಚಿವ ಜಿ.ಪರಮೇಶ್ವರ್ ಅವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಚಿವ ಸಂಪುಟದ ಮುಂದೆ ಬಂದಾಗ ಪರಿಶೀಲಿಸಲಾಗುವುದು ಎಂದರು.

30 ದಿನಗಳಲ್ಲಿ ವರದಿ:

ಕಾಲ್ತುಳಿತ ಪ್ರಕರಣದಲ್ಲಿ ಅನೇಕ ಆಯೋಗ ರಚನೆಯಾಗಿದ್ದು ಇವು ತಾರ್ಕಿಕ ಅಂತ್ಯ ಕಾಣುವುದೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ತನಿಖೆ ಕೈಗೊಳ್ಳಲು ಏಕ ವ್ಯಕ್ತಿ ಆಯೋಗ ರಚನೆ ಮಾಡಿದ್ದು ಅದು 30 ದಿನಗಳಲ್ಲಿ ವರದಿ ಸಲ್ಲಿಸಲಿದೆ. ಈ ಬಗ್ಗೆ ಮಾತನಾಡಲು ಇಚ್ಛಿಸುವುದಿಲ್ಲ ಎಂದರು.

ಪಕ್ಷದ ವರಿಷ್ಠರ ತೀರ್ಮಾನ:

ಕಾಂತರಾಜ ಆಯೋಗ ವರದಿ ಬಗ್ಗೆ ಪಕ್ಷದ ವರಿಷ್ಠರ ನಿರ್ಧಾರ ಮುಖ್ಯಮಂತ್ರಿಗಳಿಗೆ ನಿರಾಸೆ ತಂದಿದೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ ಪಕ್ಷದ ವರಿಷ್ಠರು ನಿರ್ಧಾರ ಮಾಡಿದಂತೆ ನಾವು ಕ್ರಮ ಕೈಗೊಳ್ಳುತ್ತೇವೆ. ಇದು ನಮ್ಮ ತೀರ್ಮಾನವಲ್ಲ ಎಂದು ಹೇಳಿದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕೆ ಸರ್ಕಾರ ಒತ್ತು ನೀಡಿದೆ:

ರಾಜ್ಯದ ವಿಶ್ವ ವಿದ್ಯಾನಿಲಯಗಳಲ್ಲಿಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾತನಾಡಿ ಖಾಲಿ ಇರುವಡೆಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗಿದೆ. ಇನ್ನು ಹೆಚ್ಚಿನ ಉಪನ್ಯಾಸಕರನ್ನು ನೇಮಕ ಮಾಡಲಾಗುವುದು, ಅವರ ವೇತನವನ್ನು ಹೆಚ್ಚಿಸಿ, ಸೌಲಭ್ಯಗಳನ್ನು ನೀಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕೆ ನಮ್ಮ ಸರ್ಕಾರ ಒತ್ತುನೀಡಿದೆ ಎಂದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment