SUDDIKSHANA KANNADA NEWS/DAVANAGERE/DATE:17_12_2025
ಬೆಳಗಾವಿ: ರಾಜ್ಯದಲ್ಲಿ ಕಾವೇರಿ 2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡುವಲ್ಲಿ ಉಂಟಾಗಿರುವ ತಾಂತ್ರಿಕ ತೊಂದರೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಲಾಗುವುದು” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಕಾವೇರಿ 2.0 ತಂತ್ರಾಂಶದಲ್ಲಿ ವಿಭಾಗಪತ್ರ ಹಾಗೂ ದಾನಪತ್ರಗಳ ನೋಂದಣಿ ಸ್ಥಗಿತವಾಗಿರುವುದಿಲ್ಲ. ಆರ್ಟಿಸಿ, ಮೋಜಿಣಿ ನಕ್ಷೆ, ಇ ಸ್ವತ್ತು ಖಾತಾ, ಇ-ಆಸ್ತಿ ಖಾತಾ ಹಾಗೂ ಯುಎಲ್ಎಮ್ಎಸ್ ಖಾತಾ ಹೊಂದಿರುವ ಸ್ವತ್ತುಗಳ ವಿಭಾಗಪತ್ರ ಹಾಗೂ ದಾನಪತ್ರಗಳು ಎಂದಿನಂತೆ ನೋಂದಣಿ ಆಗುತ್ತಿವೆ. ಕಾವೇರಿ 2.0 ತಂತ್ರಾಂಶದಲ್ಲಿ 2024-25ನೇ ಸಾಲಿನಲ್ಲಿ 1,15,068 ವಿಭಾಗ ಪತ್ರಗಳು ಮತ್ತು 1,39,134 ದಾನಪತ್ರಗಳು ಅದೇ ರೀತಿ 2025-26ನೇ ಸಾಲಿನಲ್ಲಿ 79,515 ವಿಭಾಗ ಪತ್ರಗಳು ಹಾಗೂ 92,618 ದಾನಪತ್ರಗಳು ನೋಂದಣಿ ಆಗಿವೆ ಎಂದು ತಿಳಿಸಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಉತ್ತರಿಸಿದರು.





Leave a comment