Site icon Kannada News-suddikshana

ಬರ ಪರಿಹಾರದ ಮನವಿಗೆ ಕೇಂದ್ರ ಇನ್ನೂ ಸ್ಪಂದಿಸಿಲ್ಲ, ನಾವು ಕೇಳುತ್ತಿರುವುದು ಭಿಕ್ಷೆಯಲ್ಲ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಿಡಿ

SUDDIKSHANA KANNADA NEWS/ DAVANAGERE/ DATE:17-11-2023

ಬೆಂಗಳೂರು: ಕೇಂದ್ರದಿಂದ 17900 ಕೋಟಿ ರೂ.ಗಳ ಬರಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ. ಹಾಗೂ ಕೇಂದ್ರ ಬರ ಅಧ್ಯಯನ ತಂಡ ಪರಿಶೀಲನೆ ನಡೆಸಿ ಒಂದು ತಿಂಗಳಾದರೂ ಕೂಡ ವರದಿಯನ್ನು ನೀಡಿಲ್ಲ ಹಾಗೂ ಸರ್ಕಾರದ
ಮನವಿಗೆ ಕೇಂದ್ರ ಇದುವರೆಗೂ ಸ್ಪಂದಿಸಿಲ್ಲ. ಬರಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ. ಎನ್ ಡಿ ಆರ್ ಎಫ್ ನಡಿ ಪರಿಹಾರವನ್ನು ನೀಡಬೇಕಿದ್ದು, ಅದನ್ನು ರಾಜ್ಯ ನೀಡಿರುವ ತೆರಿಗೆಯ ಮೊತ್ತವೇ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯಸರ್ಕಾರ ಬರಪರಿಹಾರ ನೀಡುವ ಸಂಬಂಧ ಕೇಂದ್ರಕ್ಕೆ ಒಂದು ವಾರದ ಗಡುವು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬರಪರಿಹಾರಕ್ಕೆ ಸಂಬಂಧಿಸಿದಂತೆ
ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆಗಳನ್ನು ನಡೆಸಲಾಗಿದೆ ಎಂದರು.

ಜಿಎಸ್ ಟಿಯ ರಾಜ್ಯದ ಪಾಲು ಕೇಂದ್ರದಿಂದ ನೀಡುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, 15ನೇ ಹಣಕಾಸಿನ ಆಯೋಗದ ಅವಧಿ ಮುಗಿಯುತ್ತಾ ಬಂದಿದೆ. ಮುಂಬರುವ 16ನೇ ಹಣಕಾಸಿನ ಆಯೋಗದಲ್ಲಿಯೂ ರಾಜ್ಯಕ್ಕೆ ಅನ್ಯಾಯವಾದರೆ, ಸರ್ಕಾರದ ಮುಂದಿನ ಹೆಜ್ಜೆಯ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಭಾರತ ವಿಶ್ವಕಪ್ ಗೆಲ್ಲುವ ವಿಶ್ವಾಸವಿದೆ:

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ವಿಶ್ವಕಪ್ ಅಂತಿಮ ಪಂದ್ಯ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನವೆಂಬರ್ 19 ರಂದು ಈ ಪಂದ್ಯ ನಡೆಯಲಿದ್ದು, ಭಾರತದ ತಂಡ ಅಜೇಯರಾಗಿ ಕೊನೆಯ ಹಂತದವರೆಗೆ ತಲುಪಿದ್ದು, ಭಾರತದ ತಂಡ ಒಗ್ಗಟ್ಟಿನಿಂದ ತಂಡಸ್ಪೂರ್ತಿಯಿಂದ ಆಡಿದಾಗ ಮಾತ್ರ ಗೆಲುವು ನಮ್ಮದಾಗುತ್ತದೆ. ಭಾರತ ತಂಡ ಈ ಬಾರಿಯ ವಿಶ್ವಕಪ್ ಗೆಲ್ಲುತ್ತಾರೆ ವಿಶ್ವಾಸವನ್ನು ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ತಂಡಕ್ಕೆ ಶುಭ ಕೋರಿದರು.

Exit mobile version