ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ನಮ್ಗೆ ಜಯ ಖಚಿತ, ಫೆ.10ರ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ: ಡಾ. ಜಿ. ಎಂ. ಸಿದ್ದೇಶ್ವರ

On: February 5, 2025 1:22 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:05-02-2025

ದಾವಣಗೆರೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಬದಲಾವಣೆ ಖಚಿತ. ಹೋರಾಟ ನಡೆಸುತ್ತಿರುವ ನಮಗೆ ಜಯ ಖಚಿತ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ಸಂಸದ ಡಾ. ಜಿ. ಎಂ. ಸಿದ್ದೇಶ್ವರ ಮಾಹಿತಿ ನೀಡಿದ್ದಾರೆ. ಈ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟುಹಿಡಿದಿರುವ ಭಿನ್ನಮತೀಯರಿಗೆ ಜಯ ಸಿಗುತ್ತಾ ಎಂಬ  ತೂಹಲ ಕೆರಳಿಸಿದೆ.

ನವದೆಹಲಿಯಲ್ಲಿ ಬೀಡುಬಿಟ್ಟಿರುವ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಸಿದ್ದೇಶ್ವರ ನೇತೃತ್ವದ ರೆಬೆಲ್ಸ್ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಯಾವುದೇ ಕಾರಣಕ್ಕೂ ಬಿ. ವೈ. ವಿಜಯೇಂದ್ರ ಅವರನ್ನು ಮುಂದುವರಿಸಬಾರದು. ಈಗಾಗಲೇ ಪಕ್ಷ ಸಂಘಟನೆಗೆ ಹಿನ್ನೆಡೆಯಾಗಿದೆ. ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಕಾಂಗ್ರೆಸ್ ಜೊತೆಗಿನ ಹೊಂದಾಣಿಕೆ, ವಿಜಯೇಂದ್ರ ನಾಯಕತ್ವದ ಕೊರತೆಯು ಪಕ್ಷಕ್ಕೆ ಹಿನ್ನೆಡೆ ಉಂಟಾಗಿದೆ. ಬೇರೆಯವರನ್ನು ಆಯ್ಕೆ ಮಾಡಬೇಕೆಂದು ವರಿಷ್ಠರಲ್ಲಿ ಭಿನ್ನವಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಾ. ಜಿ. ಎಂ. ಸಿದ್ದೇಶ್ವರ ಅವರು, ಫೆಬ್ರವರಿ 10ರೊಳಗೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗುತ್ತದೆಂದು ವರಿಷ್ಠರು ಭರವಸೆ ನೀಡಿದ್ದಾರೆ. ನಮ್ಮ ಬೇಡಿಕೆಗೆ ಮನ್ನಣೆ ಸಿಗಲಿದೆ ಎಂದು
ವಿಶ್ವಾಸ ವ್ಯಕ್ತಪಡಿಸಿದರು.

ಫೆಬ್ರವರಿ 10ರ ಬಳಿಕ ಸಿಹಿ ಸುದ್ದಿ ಸಿಗುತ್ತೆ. ರಾಜ್ಯಾಧ್ಯಕ್ಷರು ಬದಲಾವಣೆ ಆಗುತ್ತಾರೆ. ರಾಷ್ಟ್ರ ನಾಯಕರು ಈ ಬಗ್ಗೆ ಹೇಳಿದ್ದಾರೆ. ನಾವೂ ಅವರೊಂದಿಗೆ ಮಾತನಾಡಿದ್ದೇವೆ. ಒಳ್ಳೆ ಸುದ್ದಿ ಕೊಡ್ತಾರೆ ಎಂದು ತಿಳಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment