Home ಕ್ರೈಂ ನ್ಯೂಸ್ ಚನ್ನಗಿರಿ ತಾಲೂಕಿನ ಬಸವಾಪಟ್ಟಣದಲ್ಲಿ ಪೈಶಾಚಿಕ ಕೃತ್ಯ: ಮಹಿಳೆ ಮೇಲೆ ಗ್ಯಾಂಗ್ ರೇಪ್? ಹತ್ತು ಆರೋಪಿಗಳ ಬಂಧನ!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ಚನ್ನಗಿರಿ ತಾಲೂಕಿನ ಬಸವಾಪಟ್ಟಣದಲ್ಲಿ ಪೈಶಾಚಿಕ ಕೃತ್ಯ: ಮಹಿಳೆ ಮೇಲೆ ಗ್ಯಾಂಗ್ ರೇಪ್? ಹತ್ತು ಆರೋಪಿಗಳ ಬಂಧನ!

Share
ಚನ್ನಗಿರಿ
Share

ದಾವಣಗೆರೆ: ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೈಶಾಚಿಕ ಕೃತ್ಯ ನಡೆದಿದೆ. ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಘಟನೆ ಸಂಬಂಧ ಹತ್ತು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಘಟನೆ ಹಿನ್ನೆಲೆ ಏನು?

ಕಳೆದ ಜೂನ್ 3 ರಂದು ಮಹಿಳೆ ಮೇಲೆ ಆರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಆದರೆ ನಿನ್ನೆ ರಾತ್ರಿ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಮಹಿಳೆಗೆ ಅತ್ಯಾಚಾರ ಎಸಗಿದ್ದ ಯುವಕರು ಬೆದರಿಕೆ ಹಾಕಿದ್ದು, ಇದಕ್ಕೆ ಸೊಪ್ಪು ಹಾಕದ ಕಾರಣಕ್ಕೆ ವಿಡಿಯೋ ವೈರಲ್ ಮಾಡಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಆರು ಮಂದಿ ಯುವಕರು ಅತ್ಯಾಚಾರ ಎಸಗಿದ್ದು, ನಾಲ್ವರು ವಿಡಿಯೋ ಹರಿಬಿಟ್ಟಿದ್ದಾರೆ. ಈ ಹತ್ತು ಮಂದಿಯನ್ನು ಬಸವಾಪಟ್ಟಣ ಪೊಲೀಸರು ಬಂಧಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಜೂನ್ 3 ರಂದು ನಡೆದಿದ್ದ ಈ ಪೈಶಾಚಿಕ ಘಟನೆ ವಿಡಿಯೋ ವೈರಲ್ ಆದ ಬಳಿಕ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತ ಮಹಿಳೆಯು ಸಂಬಂಧಿಕರ ಜೊತೆ ಬಂದು ಬಸವಾಪಟ್ಟಣ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ದೂರು ನೀಡಿದ ಕೆಲವೇ ಗಂಟೆಗಳಲ್ಲೇ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಅತ್ಯಾಚಾರಕ್ಕೊಳಗಾದ ಮಹಿಳೆ ಮತ್ತು ಅತ್ಯಾಚಾರ ಎಸಗಿದ್ದ ಆರು ಯುವಕರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್. ಟಿ. ಶೇಖರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆರೋಪಿಗಳ ವಿಚಾರಣೆ ಮುಂದುವರಿದಿದ್ದು, ಏನೆಲ್ಲಾ ಮಾಹಿತಿ ಹೊರಬರಲಿದೆ ಎಂದು ತಿಳಿದು ಬರಬೇಕಿದೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles