Home ದಾವಣಗೆರೆ ನವದೆಹಲಿಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ ಮಾಡಿದ ಶಾಸಕ ಬಸವರಾಜು ಶಿವಗಂಗಾ: ಸುದೀರ್ಘ ಚರ್ಚೆ ನಡೆಸಿದ್ದೇನು?
ದಾವಣಗೆರೆನವದೆಹಲಿಬೆಂಗಳೂರು

ನವದೆಹಲಿಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ ಮಾಡಿದ ಶಾಸಕ ಬಸವರಾಜು ಶಿವಗಂಗಾ: ಸುದೀರ್ಘ ಚರ್ಚೆ ನಡೆಸಿದ್ದೇನು?

Share
ವಿ. ಸೋಮಣ್ಣ
Share

ನವದೆಹಲಿ / ದಾವಣಗೆರೆ: ಚನ್ನಗಿರಿ, ಭದ್ರಾವತಿ ಹಾಗೂ ಚಿಕ್ಕಜಾಜೂರು ಭಾಗದ ದೀರ್ಘಕಾಲದ ಮೂಲಸೌಕರ್ಯ ಬೇಡಿಕೆಗಳಿಗೆ ಸಂಬಂಧಿಸಿದಂತೆ ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದರು.

ಹೊಸ ರೈಲು ಮಾರ್ಗಕ್ಕೆ ಬೇಡಿಕೆ:

ಭದ್ರಾವತಿಯಿಂದ ಚನ್ನಗಿರಿ ಮಾರ್ಗವಾಗಿ ಚಿಕ್ಕಜಾಜೂರಿಗೆ ನೂತನ ರೈಲು ಮಾರ್ಗ ನಿರ್ಮಾಣ ಮಾಡುವ ಕುರಿತು ಸಚಿವರ ಗಮನ ಸೆಳೆಯಲಾಯಿತು. ಈ ಯೋಜನೆಯು ಸ್ಥಳೀಯ ವಾಣಿಜ್ಯ ಮತ್ತು ಸಾರ್ವಜನಿಕರ ಸಂಚಾರಕ್ಕೆ ಅತ್ಯಂತ ಸಹಕಾರಿಯಾಗಲಿದ್ದು, ಇದಕ್ಕೆ ಸಚಿವರು ಧನಾತ್ಮಕವಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಬೈಪಾಸ್ ರಸ್ತೆ ವಿಳಂಬಕ್ಕೆ ಚುರುಕು:

ಚನ್ನಗಿರಿ ಹೊರವಲಯದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ (NH) ಬೈಪಾಸ್ ರಸ್ತೆ ನಿರ್ಮಾಣದಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಸಚಿವರ ಸಮ್ಮುಖದಲ್ಲೇ ಸಂಬಂಧಪಟ್ಟ ಉನ್ನತಾಧಿಕಾರಿಗಳನ್ನು ಸಂಪರ್ಕಿಸಿ ಚರ್ಚಿಸಲಾಯಿತು. ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ವಿಳಂಬ ಧೋರಣೆ ಕೈಬಿಟ್ಟು, ಬೈಪಾಸ್ ಕಾಮಗಾರಿಯನ್ನು ತಕ್ಷಣವೇ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.

Share

Leave a comment

Leave a Reply

Your email address will not be published. Required fields are marked *