ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಚನ್ನಗಿರಿ ಕಬ್ಬಿಣದ ಕಡಲೆ: ಉಳಿದೆಡೆ ಬಿಜೆಪಿಗಿಲ್ಲ ತೊಂದರೆ, ಏಳು ಕ್ಷೇತ್ರಗಳಿಗೂ ಹುರಿಯಾಳು ಘೋಷಿಸಿದ ಕೇಸರಿ ಪಡೆ

On: April 13, 2023 1:04 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:13-04-2023

ದಾವಣಗೆರೆ: ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ(BJP)ಯು ತನ್ನ ಪಟ್ಟಿ (LIEAST) ಪ್ರಕಟಿಸಿದೆ. ದಾವಣಗೆರೆ (DAVANAGERE) ಉತ್ತರಕ್ಕೆ ಲೋಕಿಕೆರೆ ನಾಗರಾಜ್ (LOKIKERE NAGARAJ), ದಾವಣಗೆರೆ ದಕ್ಷಿಣಕ್ಕೆ ಅಜಯ್ ಕುಮಾರ್ (B. J. AJAYKUMAR) , ಮಾಯಕೊಂಡ ಕ್ಷೇತ್ರಕ್ಕೆ ಬಸವರಾಜ್ ನಾಯ್ಕ್ ಹಾಗೂ ಚನ್ನಗಿರಿಗೆ ಶಿವಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಮಾಜಿ ಸಚಿವ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಎಸ್. ಎಸ್. ಮಲ್ಲಿಕಾರ್ಜುನ್ (S. S. MALLIKARJUN) ವಿರುದ್ಧ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಲೋಕಿಕೆರೆ ನಾಗರಾಜ್ ದಾವಣಗೆರೆ ಉತ್ತರದಿಂದ, ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪರ ವಿರುದ್ಧ ಮಹಾನಗರ ಪಾಲಿಕೆ ಮಾಜಿ ಮೇಯರ್ ಅಜಯ್ ಕುಮಾರ್ ದಾವಣಗೆರೆ ದಕ್ಷಿಣದಿಂದ, ಚನ್ನಗಿರಿಯಲ್ಲಿ ಕಾಂಗ್ರೆಸ್ ನ ಶಿವಗಂಗಾ ಬಸವರಾಜ್ ವಿರುದ್ಧ ಶಿವಕುಮಾರ್, ಕಾಂಗ್ರೆಸ್ ನ ಬಸವಂತಪ್ಪ ವಿರುದ್ಧ ಬಿಜೆಪಿಯ ಬಸವರಾಜ್ ನಾಯ್ಕ್ ಕಣಕ್ಕಿಳಿಯಲಿದ್ದಾರೆ.

ಹೊನ್ನಾಳಿಗೆ ಎಂ. ಪಿ. ರೇಣುಕಾಚಾರ್ಯ, ಜಗಳೂರಿಗೆ ಎಸ್. ವಿ. ರಾಮಚಂದ್ರ, ಹರಿಹರಕ್ಕೆ ಬಿ. ಪಿ. ಹರೀಶ್ ಗೆ ಟಿಕೆಟ್ ಘೋಷಿಸಿದ್ದ ಬಿಜೆಪಿಯು ಈಗ ಉಳಿದ ನಾಲ್ವರ ಹೆಸರನ್ನು ಅಖೈರುಗೊಳಿಸಿದೆ. ಎರಡನೇ ಪಟ್ಟಿಯಲ್ಲಿಯೂ ಮಾಜಿ
ಸಿಎಂ ಬಿ. ಎಸ್. ಯಡಿಯೂರಪ್ಪರು ಹೇಳಿದವವರಿಗೆ ಬಹುತೇಕ ಟಿಕೆಟ್ ಸಿಕ್ಕಿದೆ.

ಮಾಯಕೊಂಡದಿಂದ ಮಾಜಿ ಸಚಿವ ಎಸ್. ಎ. ರವೀಂದ್ರನಾಥ್ ಅವರು ಸೂಚಿಸಿದ ಬಸವರಾಜ್ ನಾಯ್ಕ್ ಗೆ ಕೇಸರಿ ಪಡೆಯು ಮಣೆ ಹಾಕಿದೆ.

ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ (DAVANAGERE) ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸಂಸದ ಜಿ. ಎಂ. ಸಿದ್ದೇಶ್ವರ ಪುತ್ರ ಜಿ. ಎಸ್. ಅನಿತ್ ಕುಮಾರ್, ಎಸ್. ಟಿ. ವೀರೇಶ್ ಹೆಸರು ಕೇಳಿ ಬಂದಿತ್ತಾದರೂ ಯಡಿಯೂರಪ್ಪರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಲೋಕಿಕೆರೆ ನಾಗರಾಜ್ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಮಾಯಕೊಂಡ ಕ್ಷೇತ್ರದಿಂದ ಟಿಕೆಟ್ ಕೈ ತಪ್ಪಿದ್ದಕ್ಕೆ ಪ್ರೊ. ಲಿಂಗಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಹಿರಿತನ ಪರಿಗಣಿಸಿಲ್ಲ ಎಂಬ ನೋವಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಚನ್ನಗಿರಿ ಹೊರತುಪಡಿಸಿದರೆ ಉಳಿದ ಕಡೆಗಳಲ್ಲಿ ಯಾವ
ಸಮಸ್ಯೆಯೂ ಆಗಿಲ್ಲ.

ಚನ್ನಗಿರಿಯಲ್ಲಿ ಶಕ್ತಿ ಪ್ರದರ್ಶನ:

ಚನ್ನಗಿರಿ (CHANNAGIRI) ಕ್ಷೇತ್ರ ರಾಜ್ಯದ ಗಮನ ಸೆಳೆದಿರುವ ಕ್ಷೇತ್ರ. ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಡಾಳ್ ವಿರೂಪಾಕ್ಷಪ್ಪ ಯಡಿಯೂರಪ್ಪರ ಆಪ್ತರಾಗಿದ್ದರು. ಲಂಚ ಪ್ರಕರಣದಲ್ಲಿ ಜೈಲು ಸೇರಿರುವ ಕಾರಣ ವಿರೂಪಾಕ್ಷಪ್ಪರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್ ಗೆ ಬಿಜೆಪಿ (BJP) ಟಿಕೆಟ್ ಕೈ ತಪ್ಪಿದೆ. ಇದರಿಂದ ಆಕ್ರೋಶಗೊಂಡಿರುವ ಬಿಜೆಪಿ ಕಾರ್ಯಕರ್ತರು ವರಿಷ್ಠರ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಚನ್ನಗಿರಿಯಲ್ಲಿ ವಾಹನಕ್ಕೆ ಅಂಟಿಸಿದ್ದ ಕಮಲ ಚಿಹ್ನೆಯ ಸ್ಟಿಕ್ಕರ್ ತೆಗೆದು, ಬಿಜೆಪಿ (BJP) ಬಾವುಟಕ್ಕೆ ಬೆಂಕಿ ಹಚ್ಚಿ ಸುಡುವ ಮೂಲಕ ಕಾರ್ಯಕರ್ತನೊಬ್ಬ ಆಕ್ರೋಶ ವ್ಯಕ್ತಪಡಿಸಿದ ವಿಡಿಯೋ ಸಖತ್ ವೈರಲ್ ಆಗಿದೆ. ಮತ್ತೊಂದು ಬೆಳವಣಿಗೆಯಲ್ಲಿ ಚನ್ನಗಿರಿ ನಗರದಲ್ಲಿ ಮಾಡಾಳ್ ಮಲ್ಲಿಕಾರ್ಜುನ್ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಮಾತ್ರವಲ್ಲ, ಸಾವಿರಾರು ಜನರ ಜೊತೆಗೆ ಮೆರವಣಿಗೆ ನಡೆಸಿದ್ದಾರೆ. ಈ ಮೂಲಕ ಶಕ್ತಿ ಪ್ರದರ್ಶಿಸಿದ್ದು, ಮುಂದಿನ ನಡೆ ಏನು ಎಂಬ ಬಗ್ಗೆ ಚರ್ಚೆಯಾಗುತ್ತಿದೆ.

ಯಡಿಯೂರಪ್ಪ ಬುಲಾವ್:

ಚನ್ನಗಿರಿಯಲ್ಲಿ ಆಗುತ್ತಿರುವ ಘಟನಾವಳಿಗಳನ್ನು ಗಮನಿಸಿರುವ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ. ಎಸ್. ಯಡಿಯೂರಪ್ಪ ಅವರು, ಮಾಡಾಳ್ ಮಲ್ಲಿಕಾರ್ಜುನ್ ಗೆ ಬುಲಾವ್ ನೀಡಿದ್ದಾರೆ. ತಮ್ಮನ್ನು ಭೇಟಿ ಮಾಡುವಂತೆ ಸೂಚಿಸಿದ್ದಾರೆ.

ಪಕ್ಷೇತರರಾಗಿ ಕಣಕ್ಕೆ..?

ಚನ್ನಗಿರಿ ಕ್ಷೇತ್ರದಿಂದ ಬಿಜೆಪಿ (BJP)ಬಂಡಾಯ ಅಭ್ಯರ್ಥಿಯಾಗಿ ಪಕ್ಷೇತರನಾಗಿ ಕಣಕ್ಕಿಳಿಯಲು ಮಲ್ಲಿಕಾರ್ಜುನ್ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ. ಅಭಿಮಾನಿಗಳು, ಮುಖಂಡರು, ಕಾರ್ಯಕರ್ತರ ಜೊತೆ ಈಗಾಗಲೇ ಸಭೆ ಮೇಲೆ ಸಭೆ ನಡೆಸಿದ್ದಾರೆ. ಎಲ್ಲರದ್ದೂ ಒಂದೇ ಅಭಿಪ್ರಾಯ. ಬಿಜೆಪಿಗೆ ಈ ಬಾರಿಯ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು. ಪಕ್ಷೇತರರಾಗಿ ಕಣಕ್ಕಿಳಿಯಿರಿ, ನಾವು ನಿಮ್ಮನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂಬ ಒತ್ತಡ ಹೇರುತ್ತಿದ್ದಾರೆ.

ಕಣ್ಣೀರು ಹಾಕಿದ ಮಲ್ಲಿಕಾರ್ಜುನ್:

ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನರು ಮಲ್ಲಿಕಾರ್ಜುನ್ (MALLIKARJUN) ಅವರಿಗೆ ಧೈರ್ಯ, ಸಾಂತ್ವನ ಹೇಳುವ ಕೆಲಸ ಮಾಡಿದರು. ಆ ಬಳಿಕ ನಡೆದ ಸಭೆಯಲ್ಲಿ ಮಲ್ಲಿಕಾರ್ಜುನ್ ಟಿಕೆಟ್ ಕೈತಪ್ಪಿದ್ದಕ್ಕೆ ಕಣ್ಣೀರು ಸುರಿಸಿದ ಘಟನೆಯೂ ನಡೆಯಿತು. ಕ್ಷೇತ್ರದ ಜನರು ಅಪೇಕ್ಷೆ ಪಡುವ ರೀತಿಯಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಮಲ್ಲಿಕಾರ್ಜುನ್ ಹೇಳಿದರು. ಕಷ್ಟ ಕಾಲದಲ್ಲಿ ನನ್ನ ಜೊತೆಗೆ ನಿಂತಿರುವ ಪ್ರತಿಯೊಬ್ಬರಿಗೂ ಆಭಾರಿಯಾಗಿದ್ದೇನೆ ಎಂದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment