SUDDIKSHANA KANNADA NEWS/ DAVANAGERE/ DATE:15-04-2025
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಸಂಕಷ್ಟ ಎದುರಾಗಲಿದೆ.
ಭಾರತೀಯ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ಆರೋಪಪಟ್ಟಿ ಸಲ್ಲಿಸಿದೆ.
ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯವು ಚಾರ್ಜ್ ಶೀಟ್ ಸಲ್ಲಿಸಿದ್ದು, ತಾಯಿ ಮಗನಿಗೆ ಢವಢವ ಶುರುವಾಗಿದೆ.
ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯಕ್ಕೆ ಸಲ್ಲಿಸಲಾದ ಆರೋಪಪಟ್ಟಿಯಲ್ಲಿ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ, ಸುಮನ್ ದುಬೆ ಮತ್ತು ಇತರರ ಹೆಸರುಗಳಿವೆ. ಏಪ್ರಿಲ್ 25 ರಂದು ನ್ಯಾಯಾಲಯವು ಈ ಪ್ರಕರಣದ ವಿಚಾರಣೆ ನಡೆಸಲಿದೆ.