ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್ ಗೆ 9 ನಕ್ಸಲರು ಬಲಿ

On: September 3, 2024 5:16 PM
Follow Us:
---Advertisement---

ದಾಂತೇವಾಡ: ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ 9 ನಕ್ಸಲರು ಹತ್ಯೆಯಾದ ಘಟನೆ ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಇಂದು ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಬೆಳಿಗ್ಗೆ 10:30ರ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು. ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)ಗೆ ಸೇರಿದ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಅದರ ಪಶ್ಚಿಮ ಬಸ್ತಾರ್ ವಿಭಾಗದ ಘಟಕಕ್ಕೆ ಸೇರಿದ ನಕ್ಸಲರ ಉಪಸ್ಥಿತಿಯ ಕುರಿತು ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಬಸ್ತಾರ್ ರೇಂಜ್ ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ತಿಳಿಸಿದ್ದಾರೆ.

ಗುಂಡಿನ ಚಕಮಕಿಯು ದೀರ್ಘಕಾಲದವರೆಗೆ ನಡೆದಿದೆ. ಈ ಎನ್‌ಕೌಂಟರ್‌ನಲ್ಲಿ ‘ಸಮವಸ್ತ್ರ’ ಧರಿಸಿದ್ದ 9 ನಕ್ಸಲರ ಹತರಾಗಿದ್ದಾರೆ. ನಕ್ಸಲರ ಮೃತದೇಹವನ್ನು ಸ್ಥಳದಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ. ಜೊತೆಗೆ ಎನ್‌ಕೌಂಟರ್ ನಡೆದ ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದಿದ್ದಾರೆ.

ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿದ್ದು, ಘಟನಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಇದುವರೆಗೆ ಛತ್ತೀಸ್‌ಗಢದಲ್ಲಿ ವಿವಿಧ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳು 154 ನಕ್ಸಲರನ್ನು ಹತ್ಯೆ ಮಾಡಿದೆ ಎಂದು ಪೊಲೀಸರು ಹೇಳಿದ್ದಾರೆ.

Join WhatsApp

Join Now

Join Telegram

Join Now

Leave a Comment