SUDDIKSHANA KANNADA NEWS/ DAVANAGERE/ DATE-07-05-2025
ದಾವಣಗೆರೆ: ನಗರದ ಹದಡಿ ರಸ್ತೆಯ ಕ್ಲಬ್ ನಲ್ಲಿ ರೌಡಿಶೀಟರ್ ಕಣುಮಾ ಅಲಿಯಾಸ್ ಸಂತೋಷ್ ಕುಮಾರ್ ಹತ್ಯೆ ಪ್ರಕರಣದ ಆರೋಪಿ ಚಾವಳಿ ಸಂತು ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ.
ಕಾಂಗ್ರೆಸ್ ಮುಖಂಡ ಹಾಗೂ ರೌಡಿಶೀಟರ್ ಆಗಿದ್ದ ಸಂತೋಷ್ ಕುಮಾರ್ ಅವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದ ಹತ್ತು ಆರೋಪಿಗಳು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದರು. ಆ ಬಳಿಕ ಹೊಳಲ್ಕೆರೆ ಪೊಲೀಸರು ದಾವಣಗೆರೆ ಪೊಲೀಸರಿಗೆ ಹಸ್ತಾಂತರಿಸಿದ್ದರು. ಇಂದು ಸ್ಥಳ ಮಹಜರು ನಡೆಸಲು ಆರೋಪಿಗಳನ್ನು ಕರೆ ತಂದಿದ್ದರು.
ಕಣುಮಾ ಹತ್ಯೆಮಾಡಿದ ಬಳಿಕ ದಾವಣಗೆರೆ ತಾಲೂಕಿನ ಆವರೆಗೆರೆ ಗ್ರಾಮದಲ್ಲಿ ಚಾವಡಿ ಸಂತು ಮೊಬೈಲ್ ಬಿಸಾಡಿ ಹೋಗಿದ್ದ. ಈ ಮೊಬೈಲ್ ಅನ್ನು ಪತ್ತೆ ಹಚ್ಚಲು ಪೊಲೀಸರು ಸ್ಥಳ ಮಹಜರಿಗಾಗಿ ಚಾವಳಿ ಸಂತು ಕರೆ ತಂದಿದ್ದರು. ಆಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ದಾವಣಗೆರೆ ಡಿವೈಎಸ್ಪಿ ಶರಣ ಬಸವೇಶ್ವರ ಅವರು ಆರೋಪಿ ಚಾವಳಿ ಸಂತು ಕಾಲಿಗೆ ಗುಂಡು ಹೊಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗಾಯಗೊಂಡಿರುವ ಆರೋಪಿ ಚಾವಳಿ ಸಂತುನನ್ನು ದಾವಣಗೆರೆ ನಗರದ ಸಿಜೆ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕಣುಮಾ ಅಲಿಯಾಸ್ ಸಂತೋಷ್ ಕುಮಾರ್ ಹತ್ಯೆ ಪ್ರಕರಣದಲ್ಲಿ ಚಾವಳಿ ಸಂತು ಹೆಸರು ಬಲವಾಗಿ ಕೇಳಿ ಬಂದಿತ್ತು. ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಲು ಹೋಗಿ ಚಾವಳಿ ಸಂತು ಗುಂಡೇಟು ತಗುಲಿ ಆಸ್ಪತ್ರೆಗೆ ದಾಖಲಾಗುವಂತಾಗಿದೆ.
ಯಾರ್ಯಾರು ಶರಣಾಗಿದ್ದರು?
ನಗರದ ಹದಡಿ ರಸ್ತೆಯಲ್ಲಿನ ಇಸ್ಪೀಟ್ ಕ್ಲಬ್ ನಲ್ಲಿ ಹತ್ಯೆಗೀಡಾದ ರೌಡಿಶೀಟರ್ ಕಣುಮಾ ಅಲಿಯಾಸ್ ಸಂತೋಷ್ ಕುಮಾರ್ ಕೊಲೆ ಪ್ರಕರಣದ ಹತ್ತು ಆರೋಪಿಗಳು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪೊಲೀಸ್ ಠಾಣೆಗೆ ಹಾಜರಾಗಿ ಶರಣಾಗಿದ್ದರು.
ಸಂತೋಷ್ ಅಲಿಯಾಸ್ ಕಣುಮಾ ಹತ್ಯೆ ಪ್ರಕರಣ ಸಂಚಲನ ಮೂಡಿಸಿತ್ತು. ಆದ್ರೆ, ಆರೋಪಿಗಳು ಹೊಳಲ್ಕೆರೆ ಪೊಲೀಸ್ ಠಾಣೆಗೆ ಹೋಗಿ ಹಾಜರಾಗಿರುವುದು ಕುತೂಹಲ ಕೆರಳಿಸಿತ್ತು. ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಅವರು ಠಾಣೆಗೆ ಭೇಟಿ ನೀಡಿ, ಆರೋಪಿಗಳ ಮಹಜರು ನಡೆಸಿದ್ದರು. ಆ ಬಳಿಕ ಆರೋಪಿಗಳನ್ನು ದಾವಣಗೆರೆ ಪೊಲೀಸರಿಗೆ ಹಸ್ತಾಂತರಿಸಿದ್ದರು.
ಹತ್ಯೆ ಮಾಡಿದ ಆರೋಪಿಗಳ ವಿವರ:
ದಾವಣಗೆರೆಯ ಆರ್ ಎಂ ಸಿ ರಸ್ತೆಯ ಭಾರತ್ ಕಾಲೋನಿ ನಿವಾಸಿಯಾದ ಟೈಲ್ಸ್ ಕೆಲಸ ಮಾಡುತ್ತಿದ್ದ ಸಂತೋಷ (28), ಭಾರತ್ ಕಾಲೋನಿಯ ಟೈಲ್ಸ್ ಕೆಲಸ ಮಾಡುತ್ತಿದ್ದ ಕಾರ್ತಿಕ್ (29), ದಾವಣಗೆರೆ ನಗರದ ಬಾಬು ಜಗಜೀವನ್ ರಾಮ್ ನಗರದ ಬೂದಾಳ್ ರಸ್ತೆಯ ವಾಸಿಯಾದ ಹಮಾಲಿ ಕೆಲಸ ಮಾಡುತ್ತಿದ್ದ ಪ್ರಭು (30), ನವೀನ್ ಅಲಿಯಾಸ್ ಬಾಕ್ರಿ (25). ರಾಜ ಅಲಿಯಾಸ್ ತಾರಕ್ (25), ಹರಳಯ್ಯನಗರದ ಹಳೇಚಿಕ್ಕನಹಳ್ಳಿ ವಾಸಿಯೂ ಆದ ಪೇಟಿಂಗ್ ಕೆಲಸ ಮಾಡುತ್ತಿದ್ದ ನವೀನ್ @ ಸೈಲೆಂಟ್ ನವೀನ್ (20), ಭಾರತ್ ಕಾಲೋನಿ ನಿವಾಸಿ ಮಾರುತಿ (25), ಭಾರತ್ ಕಾಲೋನಿಯ ಟೈಲ್ಸ್ ಕೆಲಸ ಮಾಡುತ್ತಿದ್ದ ಬಸವರಾಜ್ ಅಲಿಯಾಸ್ ಪಿಂಕಿ (20), ಆವರಗೆರೆಯ ಪ್ರಥಮ ವರ್ಷದ ಬಿ. ಕಾಂ. ವಿದ್ಯಾರ್ಥಿ ಜಯಸೂರ್ಯ ಅಲಿಯಾಸ್ ಪಿ. ಟಿ. (20), ಆಟೋ ಡ್ರೈವರ್ ಭರತ್ ಅಲಿಯಾಸ್ ಸ್ಲಮ್ (26) ಶರಣಾದ ಆರೋಪಿಗಳಾಗಿದ್ದರು.
ವಿದ್ಯಾನಗರ ಪೊಲೀಸ್ ಠಾಣೆಗೆ ಕಣುಮಾ ಅಲಿಯಾಸ್ ಸಂತೋಷ್ ಕುಮಾರ್ ಪತ್ನಿ ನೀಡಿದ್ದ ದೂರಿನಲ್ಲಿ 12 ಮತ್ತು ಇತರೆ ಆರೋಪಿಗಳ ವಿರುದ್ಧ ಕೊಲೆ ಮಾಡಿದ ಆರೋಪ ಮಾಡಲಾಗಿತ್ತು. ಗುಂಡಪ್ಪ, ಕಾರ್ತಿಕ್ ಭಾರತ್ ಕಾಲೋನಿ, ನವೀನ್ ಬೂದಾಳ್ ರಸ್ತೆ, ಖಾರದ ಪುಡಿ ಮಂಜನ ತಮ್ಮ ನವೀನ್, ಚಾವಳಿ ಸಂತು, ಬಸವರಾಜ್ ಅಲಿಯಾಸ್ ಬಸ್ಯ, ಹನುಮಂತ, ಗಡ್ಡ ವಿಜಿ, ಚಿಕ್ಕನಹಳ್ಳಿ ಶಿವು, ಕಡ್ಡಿ ರಘು, ಪ್ರಶಾಂತ್ ಅಲಿಯಾಸ್ ಪಚ್ಚಿ, 60 ಅಡಿ ರೋಡ್ ಗಣಿ ಮತ್ತು ಇತರರು ಸೇರಿ ನನ್ನ ಪತಿಯನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.