SUDDIKSHANA KANNADA NEWS/ DAVANAGERE/ DATE:16-10-2024
ದಾವಣಗೆರೆ: ನ್ಯಾಮತಿ ತಾಲೂಕಿನ ಯರಗನಾಳ್, ಕುದುರೆಕೊಂಡ ಗ್ರಾಮಕ್ಕೆ ಹೋಗುತ್ತಿದ್ದ ಕಾರೊಂದಕ್ಕೆ ಉಜ್ಜಿನಿ ಮಟ್ಟಿಯ ಸಮೀಪ ರಸ್ತೆಯಲ್ಲಿ ಚಿರತೆಯೊಂದು ರಸ್ತೆಯ ಒಂದು ಬದಿಯಿಂದ ಮತ್ತೊಂದು ಕಡೆಗೆ ತೆರಳುವ ದೃಶ್ಯವನ್ನು ಕಾರು ಸವಾರರು ಸೋಮವಾರ ರಾತ್ರಿ ಸೆರೆ ಹಿಡಿದಿದ್ದಾರೆ. ಈ ಭಾಗದ ರೈತರು ಹಾಗು ಸಾರ್ವಜನಿಕರಿಗೆ ಆತಂಕ ಸೃಷ್ಟಿಸಿದೆ.
ಚಿರತೆ ಓಡಾಟದ ವಿಡಿಯೋ ವೈರಲ್ ಆದ ಹಿನ್ನಲೆ ಈ ಭಾಗದಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸವಾರರು ಹಾಗೂ ಜಮೀನಿನ ರೈತರು ಎಚ್ಚರಿಕೆಯಿಂದ ಓಡಾಡುವಂತೆ ಸಲಹೆ ನೀಡಿದ್ದಾರೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸುವಂತೆ ಸಾರ್ವಜನಿಕರ ಒತ್ತಾಯವಾಗಿದೆ.