ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇ ಕೇರ್ ಸೆಂಟರ್ ಗಳನ್ನ ಮುಂಬರುವ ಒಂದು ತಿಂಗಳ ಒಳಗಾಗಿ ಪ್ರಾರಂಭಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೆ.ಸಿ ಜನರಲ್ ಆಸ್ಪತ್ರೆಯ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಕ್ಯಾನ್ಸರ್ ರೋಗಿಗಳು ಕಿಮೋಥೆರಪಿಗಾಗಿ ಇಂದು ದೂರದ ನಗರಪ್ರದೇಶದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಬರುವ ಪರಿಸ್ಥಿತಿಯಿದೆ. ಜನರಿಗೆ ಅವರ ಜಿಲ್ಲೆಗಳಲ್ಲಿಯೇ ಕಿಮೋಥೆರಪಿ ಸೇವೆ ಒದಗಿಸುವ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇ ಕೇರ್ ಸೆಂಟರ್ ಗಳನ್ನ ತೆರೆಯಲಾಗುವುದು. ಮುಂಬರುವ ಒಂದು ತಿಂಗಳ ಒಳಗಾಗಿ ಈ ಸೇವೆ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು…