SUDDIKSHANA KANNADA NEWS/ DAVANAGERE/ DATE:11-02-2025
ದಾವಣಗೆರೆ: ಪ್ರಸಕ್ತ ಸಾಲಿಗೆ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಯ ಪಂಗಡ ಹಾಗೂ ಸಾಮಾನ್ಯ ವರ್ಗದ ಗ್ರಾಮೀಣ ರೈತ ಮಹಿಳೆಯರಿಗೆ ಉಚಿತವಾಗಿ 5 ವಾರದ ನಾಟಿ ಕೋಳಿ ಮರಿಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮೀಣ ಭಾಗದ ರೈತ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 24 ಕೊನೆಯ ದಿನವಾಗಿರುತ್ತದೆ ಫಲಾನುಭವಿಗಳು ತಮ್ಮ ತಾಲ್ಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ), ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಪಶು ಆಸ್ಪತ್ರೆರವರ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಅಗತ್ಯ ದಾಖಲಾತಿಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು ಎಂದು ಇಲಾಖೆಯ ಪಶು ನಿರ್ದೇಶಕರು ತಿಳಿಸಿದ್ದಾರೆ.