Site icon Kannada News-suddikshana

ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಬಿದ್ದ ಕಾರು..!

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಕಾರೊಂದು 30 ಅಡಿ ಎತ್ತರದ ಪ್ರದೇಶದಿಂದ ಪಂಚಾಯ್ತಿ ಆವರಣದದ ಒಳಗೆ ಬಿದ್ದಿರುವ ಘಟನೆ ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದ ಬಳಿ ನಡೆದಿದೆ.

ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿದ್ದ ಪ್ರವಾಸಿ ಕಾರು ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಚಾಲಕ ವೇಗವಾಗಿ ಕಾರು ಚಲಾಯಿಸುತ್ತಿದ್ದ ಕಾರಣ ಈ ಅಪಘಾತ ಸಂಭವಿಸಿದೆ.

30 ಅಡಿ ಎತ್ತರದ ಪ್ರದೇಶದಿಂದ ಬಿದ್ದ ಕಾರು ಸುಂಕಸಾಲೆ ಗ್ರಾಮ ಪಂಚಾಯ್ತಿಯ ಆವರಣದ ಒಳಕ್ಕೆ ಬಿದ್ದಿದೆ. ಕಾರಿನಲ್ಲಿ ಐವರು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಬಿದ್ದ ರಭಸಕ್ಕೆ ಕಾರು ಬಹುತೇಕ ಜಖಂಗೊಂಡಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version